Webdunia - Bharat's app for daily news and videos

Install App

ಕಾಶಿ, ತಿರುಪತಿಗೆ ಹೋಗುವ ಕನ್ನಡಿಗರಿಗೆ ಗುಡ್‌ ನ್ಯೂಸ್‌

geetha
ಶುಕ್ರವಾರ, 16 ಫೆಬ್ರವರಿ 2024 (18:40 IST)
ಬೆಂಗಳೂರು : ಸಿಎಂ ಸಿದ್ದರಾಮಯ್ಯ‌ ಶುಕ್ರವಾರ ಮಡಿಸಿದ ಬಜೆಟ್‌ ನಲ್ಲಿ    ತಿರುಮಲದಲ್ಲಿ 200 ಕೋಟಿ ರೂ.ಗಳ ಕಾಮಗಾರಿ ಅಂತಿಮ ಹಂತದಲ್ಲಿದೆ. ಶ್ರೀಶೈಲದಲ್ಲಿ 85 ಕೋಟಿ ರೂ. ವೆಚ್ಚದಲ್ಲಿ ಮತ್ತು ಗುಡ್ಡಾಪುರದಲ್ಲಿ 11 ಕೋಟಿ ರೂ. ವೆಚ್ಚದ ಕಾಮಗಾರಿಗಳು ಪ್ರಗತಿಯಲ್ಲಿವೆ.ಹೊರ ರಾಜ್ಯಗಳಲ್ಲಿನ ಪವಿತ್ರ ಪುಣ್ಯಕ್ಷೇತ್ರಗಳಾದ ತಿರುಮಲ, ಶ್ರೀಶೈಲ, ವಾರಣಾಸಿ ಮತ್ತು ಗುಡ್ಡಾಪುರಕ್ಕೆ ಭೇಟಿ ನೀಡುವ ಕರ್ನಾಟಕದ ಭಕ್ತಾಧಿಗಳ ಅನುಕೂಲಕ್ಕಾಗಿ ಸುಸಜ್ಜಿತ ವಸತಿ ಸಂಕೀರ್ಣಗಳನ್ನು ನಿರ್ಮಾಣ ಸೇರಿದಂತೆ ಈ ಬಾರಿ ಕರ್ನಾಟಕ ರಾಜ್ಯ ಬಜೆಟ್‌ ನಲ್ಲಿ ಮುಜರಾಯಿ ಇಲಾಖೆ ಮೂಲಕ ಆಸ್ತಿಕರಿಗೆ ಸಾಕಷ್ಟು ಅನುಕೂಲ ಒದಗಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ ವಾರಣಾಸಿಯಲ್ಲಿ 5 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದರು. 

ಇವುಗಳೊಂದಿಗೆ ಧಾರ್ಮಿಕ ಮತ್ತು ದತ್ತಿ ಇಲಾಖೆಗೆ ನೀಡಿರುವ ಯೋಜನೆ ಹಾಗೂ ಹಣಕಾಸು ನೆರವಿನ ವಿವರ ಹೀಗಿದೆ. 
 
ಮಂತ್ರಾಲಯಕ್ಕೆ ಸಂಪರ್ಕ ಕಲ್ಪಿಸಲು ರಾಯಚೂರಿನ ಚಿಕ್ಕಮಂಚಾಲಿ ಗ್ರಾಮದ ಬಳಿ  ಲೋಕೋಪಯೋಗಿ ಇಲಾಖೆ ವತಿಯಿಂದ 158 ಕೋಟಿ ರೂ. ವೆಚ್ಚದಲ್ಲಿ ಬ್ರಿಡ್ಜ್-ಕಂ-ಬ್ಯಾರೇಜ್
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಶ್ರೀ ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಾಲಯ ಹಾಗೂ ಕೊಪ್ಪಳ ಜಿಲ್ಲೆಯ ಹುಲಿಗೆಮ್ಮ ದೇವಾಲಯದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಾಧಿಕಾರಗಳನ್ನು ರಚನೆ
ಯಾವುದೇ ಆದಾಯವಿಲ್ಲದ 34,165  ʻಸಿʼ ವರ್ಗದ ಐತಿಹಾಸಿಕ ದೇವಾಲಯಗಳಲ್ಲಿನ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಸಮಾಜದ ಗಣ್ಯರು ಮತ್ತು ಸಂಬಂಧಪಟ್ಟ ಇಲಾಖೆಗಳ ಪ್ರತಿನಿಧಿಗಳನ್ನೊಳಗೊಂಡ Vision Group ರಚನೆ 
ಇನಾಂ/ಇನಾಂಯೇತರ ಜಮೀನು ಕಳೆದುಕೊಂಡಂತಹ 29,523  ʻಸಿʼ  ವರ್ಗದ ದೇವಾಲಯಗಳ ಅರ್ಚಕರುಗಳಿಗೆ ಬ್ಯಾಂಕ್ ಖಾತೆಗೆ ತಸ್ತಿಕ್‌ ಮೊತ್ತ ಜಮೆ  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments