Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಂಗಳೂರು: ಕಳೆದ ಮೂರು ದಿನಗಳಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆಯಾಗುತ್ತಿದ್ದು ಮುಂದಿನ 48 ಗಂಟೆಗಳಲ್ಲಿ ಇದೇ ವಾತಾವರಣವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಸದ್ಯ ಬಿಸಿಲು, ಮೋಡದ ವಾತಾವರಣದೊಂದಿಗೆ ಇದೀಗ ಗುಡುಗು ಗಾಳಿ ಸಹಿತ ಮಳೆಯಾಗುತ್ತಿದೆ.
ಇನ್ನೂ ನಾಳೆ ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿತ್ರದುರ್ಗ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ, ದಕ್ಷಿಣ ಕನ್ನಡ, ಬೀದರ್, ಕಲಬುರಗಿ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.