Publish Date: Fri, 14 Apr 2023 (11:16 IST)
Updated Date: Fri, 14 Apr 2023 (11:50 IST)
ಕಾರವಾರ : ಚಿತ್ರದುರ್ಗದ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ರವರು ತಮ್ಮ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಶಿರಸಿಗೆ ಆಗಮಿಸಿದ ಗೂಳಿಹಟ್ಟಿ ಶೇಖರ್, ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರ ಕಚೇರಿಗೆ ತೆರಳಿ ರಾಜೀನಾಮೆ ಸಲ್ಲಿಕೆ ಮಾಡಿದರು. ಈ ಸಂದರ್ಭದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, 2023ರ ಚುನಾವಣೆಗೆ ಪಕ್ಷೇತರನಾಗಿ ಸ್ಪರ್ಧೆ ಮಾಡುತ್ತೇನೆ.
ಎಸ್ಸಿ ಜನಾಂಗದವನಾಗಿ ಜನರಲ್ನಲ್ಲಿ ಟಿಕೆಟ್ ಕೇಳಿರುವುದು ನನ್ನ ತಪ್ಪು. ಪಕ್ಷದಲ್ಲಿ ಸಾಮಾಜಿಕ ನ್ಯಾಯ ಮತ್ತು ತತ್ವ ಸಿದ್ಧಾಂತಗಳು ಅವರದ್ದೇ ಆಗಿರುತ್ತದೆ. ಪಕ್ಷದ ಜನರಲ್ನಲ್ಲಿ ಟಿಕೆಟ್ ಕೇಳಿದ್ದರಿಂದ ಬೇರೆಯವರಿಗೆ ಅವಕಾಶ ಮಾಡಿಕೊಟ್ಟಿದೆ. ಹೀಗಾಗಿ ಜನರ ಮಧ್ಯದಿಂದ ಬಂದವನಾಗಿ ಜನರ ಮಧ್ಯೆ ಇರಬೇಕು ಎನ್ನುವ ದೃಷ್ಟಿಯಿಂದ ಕ್ಷೇತ್ರದ ಮತದಾರರ ಆಕಾಂಕ್ಷೆಯಂತೆ ಈ ಚುನಾವಣೆಯಲ್ಲಿ ಪಕ್ಷೇತರನಾಗಿ ಸ್ಪರ್ಧೆ ಮಾಡುತ್ತೇನೆ ಎಂದು ಸ್ಪಷ್ಟನೆ ನೀಡಿದರು.