Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಮಹಿಳೆಯರ ರಕ್ಷಣೆಗೆ ಸರಕಾರ ಬದ್ಧ, ಆತಂಕ ಬೇಡ: ಗೃಹ ಸಚಿವ ಪರಮೇಶ್ವರ್

ಮಹಿಳೆಯರ ರಕ್ಷಣೆಗೆ ಸರಕಾರ ಬದ್ಧ, ಆತಂಕ ಬೇಡ: ಗೃಹ ಸಚಿವ ಪರಮೇಶ್ವರ್
ಬೆಂಗಳೂರು , ಗುರುವಾರ, 5 ಜನವರಿ 2017 (12:43 IST)
ಹೊಸ ವರ್ಷಾಚರಣೆ ಸಂದರ್ಭದಲ್ಲಿ ನಡೆದ ಘಟನೆಗಳು ನಿಜಕ್ಕೂ ದುರದೃಷ್ಟಕರ. ಇಂತಹ ಹೀನ ಕೃತ್ಯಗಳು ನಡೆಯಬಾರದಿತ್ತು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಬೇಸರ ವ್ಯಕ್ತಪಡಿಸಿದರು.
 
ವಿಕಾಸಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬೆಂಗಳೂರು ಎಲ್ಲರಿಗೂ ಸೇಫ್. ಎಲ್ಲರಿಗೂ ರಕ್ಷಣೆ ನೀಡುವುದು ಸರಕಾರದ ಕರ್ತವ್ಯ. ಮಹಿಳೆಯರು ಹಾಗೂ ಮಕ್ಕಳ ರಕ್ಷಣೆಗೆ ರಾಜ್ಯ ಸರಕಾರ ಮೊದಲ ಆದ್ಯತೆ ನೀಡಲಾಗುತ್ತಿದೆ. ಆದರೆ, ಬೆಂಗಳೂರನ್ನು ಬೇರೆ ರೀತಿಯಲ್ಲಿ ಬಿಂಬಿಸಲಾಗುತ್ತಿದೆ ಎಂದು ದೂರಿದರು.
 
ಮಹಿಳೆಯರ ಮೇಲಿನ ದೌರ್ಜನದ ಕುರಿತು ನೀಡಿದ ಹೇಳಿಕೆಯಿಂದಾಗಿ ರಾಷ್ಟ್ರೀಯ ಮಹಿಳಾ ಆಯೋಗ ನೋಟಿಸ್ ಜಾರಿ ಮೊಡಿದೆ. ಸದ್ಯದಲ್ಲಿಯೇ ನೋಟಿಸ್‌ಗೆ ಉತ್ತರಿಸುತ್ತೇನೆ ಎಂದು ಸ್ಪಷ್ಟಪಡಿಸಿದರು.
 
ಇನ್ಮುಂದೆ ಟೈಟ್ ಸೆಕ್ಯೂರಿಟಿ....
 
ರಾತ್ರಿ ವೇಳೆ ಅನಗತ್ಯವಾಗಿ ಸುತ್ತಾಡುವವರನ್ನು ಹಿರಿಯ ಪೊಲೀಸ್ ಅಧಿಕಾರಿಗಳು ವಿಚಾರಣೆಗೊಳಪಡಿಸಲಿದ್ದು, ಮಹಿಳೆಯರ ಮೇಲಿನ ದೌರ್ಜನ್ಯ ತಡೆಗಟ್ಟಲು ಮಫ್ತಿಯಲ್ಲಿಯೂ ಸಹ ಪೊಲೀಸರು ಕಾರ್ಯನಿರ್ವಹಿಸಲಿದ್ದಾರೆ. ಜೊತೆಗೆ ನಗರದಲ್ಲಿ ಹೊಸದಾಗಿ 550 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಕಾಂಗ್ರೆಸ್ ಸರಕಾರದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಹೆಚ್ಚಳ: ಕರಂದ್ಲಾಜೆ ಕಿಡಿ