Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಮೊಹರಂ ಹಬ್ಬವನ್ನು ಆಚರಿಸುವ ಸಂಬಂಧ ಸರ್ಕಾರದ ಮಾರ್ಗಸೂಚಿಗಳು

ಮೊಹರಂ ಹಬ್ಬವನ್ನು ಆಚರಿಸುವ ಸಂಬಂಧ ಸರ್ಕಾರದ ಮಾರ್ಗಸೂಚಿಗಳು
bangalore , ಗುರುವಾರ, 12 ಆಗಸ್ಟ್ 2021 (21:15 IST)
ಸಾರ್ವಜನಿಕ ಸ್ಥಳಗಳಲ್ಲಿ ಅಲಂಗಳನ್ನು ಪಂಜಾವನ್ನು ಸ್ಥಾಪಿಸುವುದು ಹಾಗೂ ತಾಜಿಯಾವನ್ನು ನಿರ್ಬಂಧಿಸಲಾಗಿದೆ. 
 
ದಿನಾಂಕ:12.08.2021 ರಿಂದ 20.08.2021 ರವರೆಗೆ ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮೊಹರಂ ಪ್ರಾರ್ಥನಾ ಸಭೆ ಮತ್ತು ಮೆರವಣಿಗೆಯನ್ನು ನಿಷೇಧ
 
ಮೊಹರಂ ಸಂಬಂಧಿತ ಆಚರಣೆಗಳಲ್ಲಿ ಭಾಗವಹಿಸುವ ಭಕ್ತಾದಿಗಳು ಸೂಕ್ತ ಸಾಮಾಜಿಕ ಅಂತರದೊಂದಿಗೆ ಕನಿಷ್ಠ ಸಂಖ್ಯೆಯಲ್ಲಿ ಭಾಗವಹಿಸಬೇಕು
 
ಪಂಜ, ಆಲಂ ಮತ್ತು ತಾಜಿಯಗಳನ್ನು ಸಾರ್ವಜನಿಕರು ಮುಟ್ಟದೆ ದೂರದಿಂದ ನೋಡಬೇಕು
 
ಖಬರಸ್ಕಾನ್ ಒಳಗೊಂಡಂತೆ ಯಾವುದೇ ಖಾಲಿ ಜಾಗಗಳಲ್ಲಿ ಯಾವುದೇ ತರಹದ ಸಭೆ ಏರ್ಪಡಿಸಲು ನಿಷೇಧ
 
ಖಬರ ಸ್ಥಾನಗಳಿಗೆ ಕೇವಲ ದವನ ಮಾಡಲು ಮಾತ್ರ ಅನುಮತಿ 
 
ಪ್ರಾರ್ಥನಾ ಸ್ಥಳಗಳಲ್ಲಿ ಮಾಸ್ಕ್​​​ ಕಡ್ಡಾಯವಾಗಿ ಧರಿಸತಕ್ಕದ್ದು
 
60 ವರ್ಷಕ್ಕಿಂತ ಮೇಲ್ಪಟ್ಟವರು ಹಾಗೂ 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಮನೆಯಲ್ಲಿಯೇ ಪ್ರಾರ್ಥನೆ ಮಾಡತಕ್ಕದ್ದು
 
ಕೋವಿಡ್-19 ಸಮುಚಿತ ವರ್ತನಗಳೊಂದಿಗೆ, ಮಸೀದಿಯಲ್ಲಿ ಸಾಮೂಹಿಕ ಪ್ರಾರ್ಥನೆಗೆ ಅವಕಾಶ  
 
ಹೆಚ್ಚು ಜನರು ಆಗಮಿಸಿದ್ದಲ್ಲಿ ಎರಡು ಅಥವಾ ಹೆಚ್ಚಿನ ಪಾಳಿಯಲ್ಲಿ ಸಾಮೂಹಿಕ ಪ್ರಾರ್ಥನೆಯನ್ನು ನಡೆಸತಕ್ಕದ್ದು 
 
ಕೋವಿಡ್ 19 ಸಮುಚಿತ ವರ್ತನೆಯಂತೆ ಮಸೀದಿಗಳಲ್ಲಿ ನಮಾಜ್ ನಿರ್ವಹಿಸುವವರ ಮಧ್ಯ ಕನಿಷ್ಠ 6 ಅಡಿ ಅಂತರ ಕಾಯ್ದುಕೊಳ್ಳಬೇಕು
 
ಆಗಾಗ ಕೈಗಳನ್ನು ಸೋಪು ಮತ್ತು ಸಾನಿಟೈಸರ್‌ಗಳಿಂದ ಶುಚಿಗೊಳಿಸಿಕೊಳ್ಳಬೇಕು
 
ಮಸೀದಿಗಳಲ್ಲಿ ಪ್ರವೇಶಿಸುವ ಮೊದಲು, ದೇಹದ ತಾಪಮಾನವನ್ನು ತಪಾಸಣೆ ಮಾಡತಕ್ಕದ್ದು
 
ಭಕ್ತಾದಿಗಳು ಪ್ರವೇಶಿಸುವ ದ್ವಾರದಲ್ಲಿ ಗುಂಪು ಗೂಡುವುದನ್ನು ತಡೆಗಟ್ಟಬೇಕು 
 
ಆಡಳಿತ ಮಂಡಳಿ, ಆಡಳಿತಾಧಿಕಾರಿ, ಭಕ್ತಾಧಿಗಳು ಕುಳಿತುಕೊಳ್ಳುವ ಗರಿಷ್ಟ ಸಂಖ್ಯೆಯನ್ನು ಮುಖ್ಯದ್ವಾರದ ಬಳಿ ಪ್ರದರ್ಶಿಸಬೇಕು
 
ಮಸೀದಿಗಳನ್ನು ಹೊರತುಪಡಿಸಿ ಇತರೆ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ಪ್ರಯುಕ್ತ ಸಾಮೂಹಿಕ ಪ್ರಾರ್ಥನೆಗೆ ನಿಷೇಧ
 
ಮೊಹರಂ ಪ್ರಯುಕ್ತ ಯಾವುದೇ ರೀತಿಯ ಮೆರವಣಿಗೆ, ಸಾರ್ವಜನಿಕ ಸ್ಥಳಗಳಲ್ಲಿ ಭಾಷಣ
ಕಾರ್ಯಕ್ರಮಗಳಿಗಿಲ್ಲ ಅನುಮತಿ
 
ಭಕ್ತಾದಿಗಳು ಯಾವ ಕೆಲಸವನ್ನು ನಿರ್ವಹಿಸಬೇಕು ಯಾವ  ಕೆಲಸವನ್ನು
ನಿರ್ವಹಿಸಬಾರದು ಎಂಬ ಬಗ್ಗೆ ಧ್ವನಿ ವರ್ಧಕದ ಮೂಲಕ ಸೂಚಿಸಬೇಕು.

Share this Story:

Follow Webdunia kannada

ಮುಂದಿನ ಸುದ್ದಿ

ಫೇಸ್ ಬುಕ್ ವರೆಗೂ ಬಂತು ನಟಿಯ ಫ್ಯಾಮಿಲಿ ಮ್ಯಾಟರ್..!