ಮುಂದಿನ ವರ್ಷ ವಿಧಾನಸಭೆಗೆ ಚುನಾವಣೆಗಳು ನಡೆಯಲಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮದ್ಯ ನಿಷೇಧ ಜಾರಿಗೆ ತರುವ ವರದಿಗಳನ್ನು ಸಿಎಂ ಸಿದ್ದರಾಮಯ್ಯ ತಳ್ಳಿಹಾಕಿದ್ದಾರೆ.
"ಪ್ರಸ್ತುತ ಆರ್ಥಿಕ ವರ್ಷದಲ್ಲಿ ಮದ್ಯ ನಿಷೇಧವನ್ನು ಸರಕಾರ ಪರಿಗಣಿಸುವುದಿಲ್ಲ, ಏಕೆಂದರೆ ಇಂತಹ ನಿಷೇಧಕ್ಕೆ ಸಾಕಷ್ಟು ಸಿದ್ದತೆ ಬೇಕು. ಕರ್ನಾಟಕದಿಂದ ಇತ್ತೀಚೆಗೆ ಅಧಿಕಾರಿಗಳ ತಂಡವನ್ನು ಬಿಹಾರಕ್ಕೆ ಕಳುಹಿಸಿದ್ದು, ಮದ್ಯ ನಿಷೇಧದ ಪರಿಣಾಮಕಾರಿತ್ವವನ್ನು ಅಧ್ಯಯನ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.
ಮಹಿಳಾ ಮತದಾರರನ್ನು ಪ್ರೇರೇಪಿಸಲು ಕರ್ನಾಟಕದಲ್ಲಿ ನಿಷೇಧವನ್ನು ಜಾರಿಗೊಳಿಸಲಾಗುವುದು ಎನ್ನುವ ವರದಿಗಳನ್ನು ತಳ್ಳಿಹಾಕಿದ ಅಬಕಾರಿ ಅಧಿಕಾರಿಗಳು,.ಕರ್ನಾಟಕದ ಪ್ರಮುಖ ಆದಾಯವು ಮದ್ಯ ಮಾರಾಟದಿಂದ ಬರುವುದರಿಂದ ಸರಕಾರ ಮದ್ಯ ಮಾರಾಟ ನಿಷೇಧಿಸಲು ಸಾಧ್ಯವಿಲ್ಲ. ವಿಶೇಷವಾಗಿ ರೆರಾ ಮತ್ತು ಜಿಎಸ್‌ಟಿ ಅನುಷ್ಠಾನದ ನಂತರ ಆದಾಯ ಸಂಗ್ರಹವು ಕುಸಿದಿರುವ ಸಂದರ್ಭದಲ್ಲಿ ಮದ್ಯ ಮಾರಾಟ ನಿಷೇಧಿಸುವ ಬಗ್ಗೆ ಸರಕಾರ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.
ವೈದ್ಯಕೀಯ ಮಸೂದೆ ಜಾರಿಗೆ ತಂದು ಖಾಸಗಿ ಆಸ್ಪತ್ರೆಗಳನ್ನು ನಿಯಂತ್ರಿಸಲು ಸರಕಾರ ಪ್ರಯತ್ನಿಸುತ್ತಿದೆ ಎನ್ನುವ ಆರೋಪಗಳಿಗೆ ಉತ್ತರಿಸಿದ ಸಿಎಂ, ಬಿಲ್, ಖಾಸಗಿ ಆಸ್ಪತ್ರೆಗಳನ್ನು ನಿಯಂತ್ರಿಸಲು ಉದ್ದೇಶಿಸಿಲ್ಲ ಆದರೆ. ಬಡವರಿಗೆ ಕಡಿಮೆ ದರದಲ್ಲಿ ಚಿಕಿತ್ಸೆ ದೊರೆಯಲಿ ಎನ್ನುವ ಉದ್ದೇಶ ಸರಕಾರ ಹೊಂದಿದೆ ಎಂದು ತಿರುಗೇಟು ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.