ನಗರದಲ್ಲಿ ಒಂದು ರಾತ್ರಿಯಲ್ಲಿ ಒಂದು ಕೆರೆ ಮಾಯವಾಗುತ್ತಿದೆ. ರಿಯಲ್ ಎಸ್ಟೇಟ್ ಕಾಳಸಂತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಸಾಗಿದೆ. ರಾಜ್ಯ ಸರಕಾರ ಕತ್ತರಿಗೆ ಸಿಲುಕಿರುವ ಅಡಿಕೆಯಂತಾಗಿದೆ ಎಂದು ಜಿ.ಪರಮೇಶ್ವರ್ ಹೇಳಿದ್ದಾರೆ.
ನಗರದಲ್ಲಿ ಸುಮಾರು 400 ಕೆರೆಗಳಿವೆ. ಆದರೆ, ದಿನಕ್ಕೊಂದರಂತೆ ಕೆರೆಗಳು ಮಾಯವಾಗುತ್ತಿವೆ. ಒಂದು ಕಡೆ ಬೆಂಗಳೂರು ಅಭಿವೃದ್ಧಿಯಾಗಬೇಕು ಮತ್ತೊಂದು ಕಡೆ ಪರಿಸರ ಉಳಿಸಬೇಕು. ಅಭಿವೃದ್ಧಿ ವಿಚಾರದಲ್ಲಿ ರಾಜ್ಯ ಸರಕಾರ ಸಂಕಷ್ಟದಲ್ಲಿ ಸಿಲುಕಿದೆ ಎಂದರು.
ರುದ್ರೇಶ್ ಹತ್ಯೆ ಪ್ರಕರಣಕ್ಕೂ ಸಚಿವ ರೋಷನ್ ಬೇಗ್‌ಗೂ ಯಾವುದೇ ರೀತಿಯ ಸಂಬಂಧವಿಲ್ಲವೆನ್ನುವುದು ಪೊಲೀಸ್ ಅಧಿಕಾರಿಗಳ ವಿಚಾರಣೆಯಿಂದ ಬಹಿರಂಗವಾಗಿದೆ. ಆರೋಪ ಮಾಡುವವರು ಆರೋಪವನ್ನು ಸಾಬೀತುಪಡಿಸಬೇಕು ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆಗೆ ತಿರುಗೇಟು ನೀಡಿದರು.
ರಾಜ್ಯ ಸರಕಾರ ಪ್ರಾಮಾಣಿಕವಾಗಿ ಕರ್ತವ್ಯನಿರ್ವಹಿಸುವುದನ್ನು ಬಿಜೆಪಿಗೆ ಸಹಿಸಲು ಸಾಧ್ಯವಾಗುತ್ತಿಲ್ಲ. ಆದ್ದರಿಂದಲೇ ಬಿಜೆಪಿ ಮುಖಂಡರು ಮನಬಂದಂತೆ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ