ಬೀದಿ ನಾಯಿ ಹಾವಳಿ ನಿಯಂತ್ರಣಕ್ಕೆ ಸರ್ಕಾರದಿಂದ ಮಹತ್ವದ ಆದೇಶ ಹೊರಬಿದ್ದಿದೆ.ರಾಜ್ಯದ್ಯಾಂತ ಬೀದಿ ನಾಯಿಗಳ ಸಂತಾನ ನಿಯಂತ್ರಣ ಕಾರ್ಯಕ್ರಮ ಅನುಷ್ಠಾನಕ್ಕೆ ಸರ್ಕಾರ ಆದೇಶ ಮಾಡಿದೆ.ನಗಾರಭಿವೃದ್ದಿ ಮತ್ತು ಪಶುಸಂಗೋಪನಾ ಇಲಾಖೆಯಿಂದ ಜಂಟಿ ಸುತ್ತೋಲೆ ಹೊರಡಿಸಿದ್ದು,ರಾಜ್ಯದ ಎಲ್ಲಾ ಪುರಸಭೆ, ನಗರಸಭೆ, ಪಟ್ಟಣ ಪಂಚಾಯ್ತಿ, ನಗರ ಪಾಲಿಕೆ ವ್ಯಾಪ್ತಿಯಲ್ಲಿ ನಾಯಿಗಳ ಸಂತಾನ ನಿಯಂತ್ರಣ ಯೋಜನೆ ಸ್ಥಳೀಯ ಸಂಸ್ಥೆಗಳ ಜವಬ್ದಾರಿಯಾಗಿದೆ.
ನಾಯಿ ಕಡಿತ ರೇಬಿಸ್ ನಿಯಂತ್ರಣ ಕ್ಕಾಗಿ ಇಲಾಖೆ ಯೋಜನೆ ಜಾರಿಗೆ ಮುಂದಾಗಿದೆ.ಸಂತಾನ ನಿಯಂತ್ರಣದ ಜೊತೆಗೆ ಬೀದಿ ನಾಯಿಗಳ ಹಾವಳಿ ನಿಯಂತ್ರಣಕ್ಕೆ ಕೆಲ ಮಾರ್ಗಸೂಚಿಗಳನ್ನು ಇಲಾಖೆ ಪ್ರಕಟಿಸಿದೆ.