ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ನಾಲ್ವರು ಸರ್ಕಾರಿ ಅಧಿಕಾರಿಗಳಿಗೆ ಎಸಿಬಿ ಬೆಳ್ಳಂಬೆಳಗ್ಗೆ ಶಾಕ್ ನೀಡಿದೆ. ನಾಲ್ವರು ಅಧಿಕಾರಿಗಳ ಮನೆ ಮತ್ತು ಕಚೇರಿಯ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಕೆಪಿಟಿಸಿಎಲ್ ನಿರ್ದೇಶಕ ಎಚ್. ನಾಗೇಶ್ ಮನೆ, ಕಚೇರಿ ಮತ್ತು ಸಂಬಂಧಿಕರ ನಿವಾಸದ ಮೇಲೂ ದಾಳಿ ನಡೆದಿದೆ. ರಾಮನಗರದ ತಹಸೀಲ್ದಾರ್ ರಘುಮೂರ್ತಿ, ತಾಂತ್ರಿಕ ಶಿಕ್ಷಣ ಇಲಾಖೆಯ ಅಧೀಕ್ಷಕ ರಾಮಕೃಷ್ಣಾರೆಡ್ಡಿ, ಬಿಬಿಎಂಪಿ ಹೆಚ್ಚುವರಿ ಆಯುಕ್ತ ಡಾ. ಯತೀಶ್ ಅವರ ನಾಗರಬಾವಿ ನಿವಾಸದ ಮೇಲು ದಾಳಿ ನಡೆದಿದೆ.
ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಕಡತಗಳ ಪರಿಶೀಲನೆ ನಡೆಸುತ್ತಿದ್ದಾರೆ. ಕೆಲ ಅಧಿಕಾರಿಗಳ ಮನೆಯಲ್ಲಿ ಹಳೇ ನೋಟುಗಳು ಸಿಕ್ಕಿವೆ ಎಂದು ವರದಿಯಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ