Publish Date: Mon, 04 May 2020 (21:39 IST)
Updated Date: Mon, 04 May 2020 (21:41 IST)
ಎಸ್ ಎಸ್ ಎಲ್ ಸಿ ಪರೀಕ್ಷೆಗಳನ್ನು ನಡೆಸಲು ಸಿದ್ಧತೆಗಳನ್ನು ಆರಂಭಿಸುವಂತೆ ಸರಕಾರ ಸೂಚಿಸಿದೆ.
ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಅವರು ಪರೀಕ್ಷಾ ಸಿದ್ಧತೆಗಳನ್ನು ಶುರುಮಾಡುವಂತೆ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದಾರೆ.
ರಾಜ್ಯದ ಎಲ್ಲಾ ಶೈಕ್ಷಣಿಕ ಉಪನಿರ್ದೇಶಕರೊಂದಿಗೆ ಶಿಕ್ಷಣ ಸಚಿವರು ವಿಡಿಯೋ ಸಂವಾದ ನಡೆಸಿದ್ದಾರೆ. ಪರೀಕ್ಷೆಗಳನ್ನು ನಿರ್ವಹಣೆ ಮಾಡಬೇಕಾದ ಕ್ರಮಗಳನ್ನು ಜಾರಿಗೊಳಿಸಲು ಸಿದ್ಧರಾಗುವಂತೆ ಹೇಳಿದ್ದಾರೆ.
ಪರೀಕ್ಷೆ ಬರೆಯುವ ಮಕ್ಕಳಿಗೆ ಮಾಸ್ಕ್, ಡೆಸ್ಕ್, ಥರ್ಮಲ್ ತಪಾಸಣೆ, ಸ್ಯಾನಿಟೈಜರ್ ವ್ಯವಸ್ಥೆ ಕಲ್ಪಿಸುವಂತೆ ಸೂಚನೆ ನೀಡಿದ್ದಾರೆ.