Daily Horoscope
✕

ಮತಾಂತರ ಕಾಯ್ದೆ ಬಗ್ಗೆ ಸರ್ಕಾರ ನಿರ್ಧಾರ ತೆಗೆದುಕೊಳ್ಳುತ್ತದೆ: ಶೋಭಾ

Webdunia
ಭಾನುವಾರ, 12 ಡಿಸೆಂಬರ್ 2021 (13:08 IST)
ಬೆಳಗಾವಿ : ಬೆಳಗಾವಿ ಅಧಿವೇಶನದಲ್ಲಿ ಮತಾಂತರ ಕಾಯ್ದೆ ವಿಚಾರವಾಗಿ ಸರ್ಕಾರ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಕೇಂದ್ರ ಕೃಷಿ ಇಲಾಖೆ ಸಹಾಯಕ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಅಧಿವೇಶನದಲ್ಲಿ ಮತಾಂತರ ಕಾಯ್ದೆ ವಿಚಾರವಾಗಿ ಸರ್ಕಾರ ಒಂದು ನಿರ್ಧಾರ ತೆಗೆದುಕೊಳ್ಳುತ್ತದೆ. ಮಂಗಳೂರು ಆತ್ಮಹತ್ಯೆ, ಲವ್ ಜಿಹಾದಿ ಪ್ರಕರಣಗಳ ನಂತರ, ದೇಶದಲ್ಲಿ ಮತಾಂತರ ಕಾಯ್ದೆ ಬಗ್ಗೆ ಹೆಚ್ಚು ಚರ್ಚೆ ಆಗುತ್ತಿದೆ.

ದೊಡ್ಡ ಪ್ರಮಾಣದಲ್ಲಿ ಎಲ್ಲ ಜಾತಿ ವರ್ಗದ ಜನರನ್ನು ಅವರ ಬಡತನ, ಅನಾರೋಗ್ಯ ಸಂದರ್ಭ ಮುಂದಿಟ್ಟುಕೊಂಡು ಮತಾಂತರಗೊಳಿಸುವುದು ನಡೆಯುತ್ತಿದೆ. ಇದರ ಬಗ್ಗೆ ಸರ್ಕಾರ ಗಂಭೀರವಾಗಿ ಯೋಚನೆ ಮಾಡಬೇಕು ಎಂದರು. 
ನಮ್ಮ ಬಡತನ ನಮ್ಮ ಅಸಹಾಯಕತೆಯನ್ನು ದುರುಪಯೋಗಪಡಿಸಿಕೊಳ್ಳಲು ಯಾರಿಗೂ ಅವಕಾಶ ಕೊಡಬಾರದು. ನಾವು ಕೂಡ ಸಮಾಜದ ಎಲ್ಲ ವರ್ಗದ ಜನರ ಅಭಿವೃದ್ಧಿ ಬಗ್ಗೆ ಯೋಚನೆ ಮಾಡಬೇಕು. ಯಾವ ಕಾರಣಕ್ಕೆ ಧರ್ಮವನ್ನು ಬಿಟ್ಟು ಹೋಗೋದಕ್ಕೆ ಸಾಧ್ಯವಾಗಿದೆ.

ಇದಕ್ಕೆ ಜಾತಿ ಕಾರಣವೋ, ಆರೋಗ್ಯ ಕಾರಣವೋ, ಆರ್ಥಿಕ ಪರಿಸ್ಥಿತ ಕಾರಣವೋ, ಸಾಮಾಜಿಕ ಅಡತಡೆಗಳು ಕಾರಣವೋ ಎನ್ನುವುದನ್ನು ಪ್ರಾಮಾಣಿಕವಾಗಿ ಅಧ್ಯಯನ ಮಾಡಬೇಕು. ಸೂಕ್ತವಾದ ಕ್ರಮ ತೆಗೆದುಕೊಳ್ಳಬೇಕು ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಡು ರಸ್ತೆಯಲ್ಲೇ ಯುವಕನ ಜೀವ ತೆಗೆದ ಹಂತಕರು

ಕೆಳಗಿಳಿಯಪ್ಪಾ ಎಂದು ಮನವೊಲಿಸಿದರೂ ಕೇಳಲಿಲ್ಲ.. ಸೇತುವೆಯಿಂದ ಹಾರಿಯೇ ಬಿಟ್ಟ ವ್ಯಕ್ತಿ Video

ಜೋರ್ಡಾನ್ ಚರ್ಚ್ ನಲ್ಲಿ ಜಿಹಾದಿಗಳ ಅಟ್ಟಹಾಸ: ನೋಡುತ್ತಿದ್ದಂತೇ ಉರುಳಿಬಿತ್ತು ಹೆಣಗಳ ರಾಶಿ: ಭಯಾನಕ Video

Karnataka Weather: ಇಂದು ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

ತಮ್ಮ ವಿರುದ್ಧ ಸ್ಟಿಂಜ್ ಆಪರೇಷನ್ ಮಾಡಿದವರು ಯಾರು ಎಂದು ಕೊನೆಗೂ ಬಾಯ್ಬಿಟ್ಟ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments