ವಿಧಾನಮಂಡಲದ ಉಭಯ ಸದನಗಳ ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲ ವಜೂಭಾಯಿ ವಾಲಾ ಮಾಡಿದ ಭಾಷಣ ಅತ್ಯಂತ ಕಳಪೆ ಮಟ್ಟದ್ದು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.
ವಿಧಾನಸಭೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈದ್ರಬಾದ್-ಕರ್ನಾಟಕದ ವಿಶೇಷ ಸ್ಥಾನಮಾನಕ್ಕಾಗಿ ನಾಲ್ಕು ಸಾವಿರ ಕೋಟಿ ರೂಪಾಯಿ ಇಟ್ಟಿದ್ದೇವೆ ಎಂದು ಹೇಳಿದ್ದಾರೆಯೇ ಹೊರತು ಖರ್ಚು ಮಾಡಿರುವುದಾಗಿ ಹೇಳಿಲ್ಲ. ಪಾರದರ್ಶಕ ಆಡಳಿತ ನೀಡುತ್ತೇವೆ ಎಂದು ಭ್ರಷ್ಟಾಚಾರ ನಿಗ್ರಹ ದಳ ರಚನೆ ಮಾಡಿ ಭ್ರಷ್ಟಾಚಾರ ಸಂಪೂರ್ಣವಾಗಿ ನಿಗ್ರಹ ಮಾಡಿದ್ದಾರೆ ಎಂದು ಲೇವಡಿ ಮಾಡಿದರು.
ಆರೋಗ್ಯ ಸಚಿವ ರಮೇಶ್ ಕುಮಾರ್ ಮೂರು ವರ್ಷಗಳ ಕಾಲ ರಾಜ್ಯ ಸರಕಾರ ನಿದ್ರಾವಸ್ಥೆಯಲ್ಲಿತ್ತು ಎಂದು ಹೇಳಿದ್ದಾರೆ. ಸ್ವಪಕ್ಷದ ಸಚಿವರೇ ಹಾಗೆ ಹೇಳಿದ ಮೇಲೆ ನಾವು ಟೀಕಿಸಲು ಏನು ಉಳಿದಿಲ್ಲ. ಇಂತಹ ಹೇಳಿಕೆಗಾದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಲಗಾಮು ಹಾಕುವುದು ಬೇಡವೇ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ