Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಪೊಲೀಸರಿಗೆ ಹೊಸ ವರ್ಷದ ಬಂಪರ್ ಕೊಡುಗೆ

ಪೊಲೀಸರಿಗೆ ಹೊಸ ವರ್ಷದ ಬಂಪರ್ ಕೊಡುಗೆ
Bangalore , ಗುರುವಾರ, 8 ಡಿಸೆಂಬರ್ 2016 (09:53 IST)
ಪೊಲೀಸರಿಗೆ ಹೊಸ ವರ್ಷದ ಬಂಪರ್ ಕೊಡುಗೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದಾರೆ. ರಾಜ್ಯದ 11 ಸಾವಿರ ಪೊಲೀಸ್ ಸಿಬ್ಬಂದಿಗೆ ಬಡ್ತಿ ಅವಕಾಶ ಸಿಗಲಿದೆ. ಪೇದೆಯಿಂದ ಮುಖ್ಯಪೇದೆ, ಮುಖ್ಯ ಪೇದೆಯಿಂದ ಎಎಸ್ಐ, ಎಎಸ್ಐ ಹುದ್ದೆಯಿಂದ ಪಿಎಸ್ಐ ಹುದ್ದೆಗೆ ಬಡ್ತಿ ಪಡೆಯಲಿದ್ದಾರೆ ಸಿಬ್ಬಂದಿ. ಬಡ್ತಿ ಆದೇಶ ಏಕ ಕಾಲಕ್ಕೆ ಹೊರ ಬೀಳಲಿದೆ ಎಂದು ತಿಳಿಸಿದರು.
 
ಮುಖ್ಯಮಂತ್ರಿ ಅವರ ಆದೇಶದ ಹಿನ್ನೆಲೆಯಲ್ಲಿ 11 ಸಾವಿರ ಪೊಲೀಸ್ ಸಿಬ್ಬಂದಿ ಕೆಲವೇ ದಿನಗಳಲ್ಲಿ ಬಡ್ತಿ ಪಡೆಯಲಿದ್ದಾರೆ. ಬಡ್ತಿ ಆದೇಶ ಪತ್ರಗಳನ್ನು ಆಯಾ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಗಳು ಸಿಬ್ಬಂದಿಗೆ ನೇರವಾಗಿ ವಿತರಿಸಲಿರುವುದು ವಿಶೇಷ.
 
ಸಕಾರಣ ಇಲ್ಲದೆ ಪೊಲೀಸ್ ಸಿಬ್ಬಂದಿಯ ಬಡ್ತಿ ತಡೆ ಹಿಡಿಯಬಾರದು ಎಂದು ಮುಖ್ಯಮಂತ್ರಿಗಳು ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಪೊಲೀಸ್ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸೂಚನೆ ನೀಡಿದರು.
 
ಬಡ್ತಿ ಜೊತೆಗೆ ಸರ್ಕಾರದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಪೇದೆಗಳು ಸೇರಿದಂತೆ 26702 ಸಿಬ್ಬಂದಿಯನ್ನು ನೇಮಕ ಮಾಡಿಕೊಂಡ ಹೆಗ್ಗಳಿಕೆಗೂ ಪೊಲೀಸ್ ಇಲಾಖೆ ಪಾತ್ರವಾಗಿದೆ. ಜೊತೆಗೆ ಕಳೆದ ಮೂರು ವರ್ಷದ ಅವಧಿಯಲ್ಲಿ ಹಲವಾರು ಸೌಲಭ್ಯಗಳನ್ನು ಇಲಾಖೆ ಪಡೆದುಕೊಂಡಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ಹೊಸ ತಿರುವು