Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಮತ್ತೇ ಬಂದಿದೆ ಕಡಲೆಕಾಯಿ ಪರಿಷೆ: ಮೂರು ಲಕ್ಷಕ್ಕೂ ಅಧಿಕ ಮಂದಿಯ ನಿರೀಕ್ಷೆ

Kadalekayi Parishe, Bengalore KadaleKayi Festival, Karnataka Congress Government,

Sampriya

ಬೆಂಗಳೂರು , ಬುಧವಾರ, 13 ನವೆಂಬರ್ 2024 (19:47 IST)
Photo Courtesy X
ಬೆಂಗಳೂರು: ರಾಜ್ಯ ರಾಜದಾನಿ ಬೆಂಗಳೂರಿನಲ್ಲಿ ನಡೆಯುವ ಪ್ರಸಿದ್ಧ ಬಸವನಗುಡಿ ಮತ್ತು ಮಲ್ಲೇಶ್ವರಂ ಕಡಲೆಕಾಯಿ ಪರಿಷೆಯ ದಿನಾಂಕವನ್ನು ಮುಜರಾಯಿ ಇಲಾಖೆ ಘೋಷಣೆ ಮಾಡಿದೆ. ಎರಡು ದಿನಗಳ ಕಾಲ ಈ ಪರಿಷೆ ನಡೆಸಲು ನಿರ್ಧರಿಸಿದೆ. ಇನ್ನು ಹಲವು ವಿಶೇಷತೆಗಳೊಂದಿಗೆ ಈ ಬಾರಿಯ ಕಡಲೆಕಾಯಿ ಪರಿಷೆ ನಡೆಯಲಿದೆ ಎಂದು ಗುಡ್‌ನ್ಯೂಸ್ ನೀಡಿದೆ.

ನವೆಂಬರ್ 25 ಮತ್ತು 26ರಂದು ಎರಡು ದಿನಗಳ ಕಾಲ ಬಸವನಗುಡಿಯಲ್ಲಿ ಕಡಲೆಕಾಯಿ ಪರಿಷೆ ನಡೆಯಲಿದೆ ಎಂದು ಇಲಾಖೆ ಹೇಳಿದೆ. ಈ ಸಂಬಂಧ ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅಧಿಕಾರಿಗಳ ಜೊತೆ ಸಭೆ ಮಾಡಿ ಹಲವಾರು ಸಲಹೆ ಸೂಚನೆ ನೀಡಿದ್ದಾರೆ.

ಇನ್ನೂ ಮಲ್ಲೇಶ್ವರಂ ಕಡಲೆಕಾಯಿ ಪರಿಷೆ ನವೆಂಬರ್ 15 ರಿಂದ 3 ದಿನಗಳ ಕಾಲ ನಡೆಯಲಿದೆ. ಪರಿಷೆಯನ್ನು ಪ್ಲಾಸ್ಟಿಕ್ ಮುಕ್ತವಾಗಿ ಮಾಡಲು ನಿರ್ಧರಿಸಲಾಗಿದೆ. ಪರಿಷೆಗೆ ಬರುವವರು ಮತ್ತು ವ್ಯಾಪಾರಸ್ಥರು ಪ್ಲಾಸ್ಟಿಕ್ ಬಿಟ್ಟು, ಬಟ್ಟೆ ಚೀಲವನ್ನೆ ಬಳಸುಂತೆ ಸೂಚಿಸಲಾಗಿದೆ.

ಸಾಂಸ್ಕೃತಿಕ ಕಾರ್ಯಕ್ರಮಗಳು ಕೂಡ ಇರಲಿದೆ. ಈ ಬಾರಿ ಮೂರು ಲಕ್ಷಕ್ಕೂ ಅಧಿಕ ಜನ ಭಾಗವಹಿಸುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ನಮ್ಮನೆ ಸುಟ್ಟಿದ್ದು ರಜಾಕರ್‌ಗಳು, ಮುಸ್ಲಿಮರಲ್ಲ: ಯೋಗಿ ಆರೋಪಕ್ಕೆ ಪ್ರಿಯಾಂಕ್ ಖರ್ಗೆ ಕೌಂಟರ್‌