Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಗ್ಯಾರಂಟಿ ಯೋಜನೆ ಮನೆ ಮನೆ ತಲುಪುತ್ತಿದೆ : ಶಿವಕುಮಾರ್

ಗ್ಯಾರಂಟಿ ಯೋಜನೆ ಮನೆ ಮನೆ ತಲುಪುತ್ತಿದೆ : ಶಿವಕುಮಾರ್
ಬೆಂಗಳೂರು , ಶುಕ್ರವಾರ, 28 ಏಪ್ರಿಲ್ 2023 (11:21 IST)
ಬೆಂಗಳೂರು : ಕಾಂಗ್ರೆಸ್ನ ಗ್ಯಾರಂಟಿ ಯೋಜನೆ ಮನೆ ಮನೆಗೆ ತಲುಪುತ್ತಿದೆ. ಸಮೀಕ್ಷೆಗಳು ಕೂಡಾ ಕಾಂಗ್ರೆಸ್ನ ಪರವಾಗಿದೆ. ದಕ್ಷಿಣ ಭಾರತದಲ್ಲಿ ಕರ್ನಾಟಕದಿಂದ ಹೆಬ್ಬಾಗಿಲು ತೆರೆಯುತ್ತದೆ.
 
ಈ ಬಾರಿ ಕಾಂಗ್ರೆಸ್ ಬಹುಮತದಿಂದ ಸರ್ಕಾರ ರಚನೆ ಮಾಡಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು. 2018ರಿಂದ ಜೆಡಿಎಸ್ನಿಂದ ಡಿಕೆಶಿ ವಿರುದ್ಧ ಸ್ಪರ್ಧಿಸಿದ್ದ ನಾರಾಯಣ ಗೌಡ ಗುರುವಾರ ಕೆಪಿಸಿಸಿ ಕಚೇರಿಯಲ್ಲಿ ಡಿಕೆ ಶಿವಕುಮಾರ್ ಹಾಗೂ ಸಂಸದ ಡಿಕೆ ಸುರೇಶ್ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡರು.

ಈ ವೇಳೆ ಮಾತನಾಡಿದ ಅವರು, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಹೊಸ ಬದಲಾವಣೆ ಆಗುತ್ತಿದೆ. 20-30 ವರ್ಷ ರಾಜಕೀಯ ಇತಿಹಾಸ ಪಿಜಿಆರ್ ಸಿಂಧ್ಯಾ ಕಾಂಗ್ರೆಸ್ ಸೇರ್ಪಡೆ ಆಗಿದ್ದಾರೆ. ನಾರಾಯಣ ಗೌಡ ಅವರು ಜೆಡಿಎಸ್ನಿಂದ ಸ್ಪರ್ಧಿಸಿದ್ದರು. ಅಲ್ಲದೇ ಇವರು ರೈತ ಕುಟುಂಬದ ಪ್ರಮುಖ ನಾಯಕರಾಗಿದ್ದಾರೆ ಎಂದರು. 

ಡಿಕೆಶಿಗೆ ಒಳ್ಳೆಯದಾಗಬೇಕು ಎಂದು ತಾನು ತ್ಯಾಗ ಮಾಡಿದ್ದಾರೆ. ಜೊತೆಗೆ ಪ್ರಭಾಕರ್ ರೆಡ್ಡಿ ಕೂಡಾ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆ ಆಗುತ್ತಿದ್ದಾರೆ. ಇಲ್ಲಿ ಹೊಸಬರು ಹಳಬರು ಎಂಬ ಪ್ರಶ್ನೆ ಇಲ್ಲ. ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದ್ದಾರೆ. 78 ಲಕ್ಷ ಸದಸ್ಯರು ಕಾಂಗ್ರೆಸ್ನಲ್ಲಿದ್ದಾರೆ ಎಂದು ಹೇಳಿದರು. 

Share this Story:

Follow Webdunia kannada

ಮುಂದಿನ ಸುದ್ದಿ

ಮೋದಿಯವರನ್ನು ಸಾವಿನ ಕೂಪಕ್ಕೆ ತಳ್ಳೋ ಆಹ್ವಾನ ನೀಡಿತ್ತು : ಸ್ಮೃತಿ ಇರಾನಿ