Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಗುಲ್ಬರ್ಗ ವಿವಿ 84 ವಿದ್ಯಾರ್ಥಿಗಳಿಗೆ ಚಿನ್ನದ ಪದಕ

ಗುಲ್ಬರ್ಗ ವಿವಿ 84 ವಿದ್ಯಾರ್ಥಿಗಳಿಗೆ ಚಿನ್ನದ ಪದಕ
Gulbarga , ಶುಕ್ರವಾರ, 9 ಡಿಸೆಂಬರ್ 2016 (10:08 IST)
ಗುಲಬರ್ಗಾ ವಿಶ್ವವಿದ್ಯಾಲಯದ ಡಾ. ಬಿ.ಆರ್. ಅಂಬೇಡ್ಕರ್ ಸಭಾಂಗಣದಲ್ಲಿ ಡಿಸೆಂಬರ್ 9ರಂದು ಜರುಗುವ ಗುಲಬರ್ಗಾ ವಿಶ್ವವಿದ್ಯಾಲಯದ 35ನೇ ವಾರ್ಷಿಕ ಘಟಿಕೋತ್ಸವದಲ್ಲಿ ಒಟ್ಟು 157 ಚಿನ್ನದ ಪದಕಗಳ ಪೈಕಿ 151 ಚಿನ್ನದ ಪದಕಗಳನ್ನು 84 ವಿದ್ಯಾರ್ಥಿಗಳಿಗೆ, 6 ಚಿನ್ನದ ಪದಕಗಳನ್ನು ನಗದು ಬಹುಮಾನ ರೂಪದಲ್ಲಿ ಪರಿವರ್ತಿಸಿ 8 ವಿದ್ಯಾರ್ಥಿಗಳಿಗೆ ವಿತರಿಸಲಾಗುವುದು ಎಂದು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಎಸ್. ಆರ್. ನಿರಂಜನ್ ಹೇಳಿದರು. 
 
ಅವರು ಗುರುವಾರ ವಿಶ್ವವಿದ್ಯಾಲಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕನ್ನಡ ವಿಭಾಗದ ಬಸವರಾಜ ಭೀಮರಾಯ 7 ಚಿನ್ನದ ಪದಕವನ್ನು 2 ನಗದು ಬಹುಮಾನ ಹಾಗೂ ಗಣಿತ ವಿಭಾಗದ ಸಪ್ನಾಲಿ ಏಳು ಚಿನ್ನದ ಪದಕ ಪಡೆದಿದ್ದಾರೆ ಎಂದರು.
ಈ ಘಟಿಕೋತ್ಸವದಲ್ಲಿ 16203 ಪುರುಷ ಹಾಗೂ 15202 ಮಹಿಳಾ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 31405 ವಿದ್ಯಾರ್ಥಿಗಳು ವಿವಿಧ ಪದವಿಗಳನ್ನು ಪಡೆಯಲಿದ್ದಾರೆ. ವಿವಿಧ ನಿಕಾಯಗಳ ಒಟ್ಟು 170 ವಿದ್ಯಾರ್ಥಿಗಳಿಗೆ ಪಿಎಚ್.ಡಿ. ಪದವಿ ಪ್ರದಾನ ಮಾಡಲಾಗುವ್ಯದು. ಘಟಿಕೋತ್ಸವದ ಯಶಸ್ವಿಗಾಗಿ 17 ಉಪ ಸಮಿತಿಗಳನ್ನು ರಚಿಸಲಾಗಿದೆ ಎಂದರು.
 
ಭಾರತೀಯ ವಿಜ್ಞಾನ ಸಂಸ್ಥೆಯ ಸಂದರ್ಶಕ ಪ್ರಾಧ್ಯಾಪಕ ಹೆಚ್.ಎ. ರಂಗನಾಥ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದು, ವಿಶ್ವವಿದ್ಯಾಲಯದ ಸಮಕುಲಾಧಿಪತಿ ಹಾಗೂ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಅಧ್ಯಕ್ಷತೆ ವಹಿಸಲಿದ್ದಾರೆ. ಕುಲಸಚಿವ ಪ್ರೊ.ದಯಾನಂದ ಅಗಸರ, ಮೌಲ್ಯಮಾಪನ ಕುಲಸಚಿವ ಡಾ. ಸಿ.ಎಸ್. ಪಾಟೀಲ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ನರಳಿ ನರಳಿ ಕೊನೆಗೂ ಜೀವ ತ್ಯಜಿಸಿದ ಸಿದ್ದ