Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಎಚ್ಚರಿಕೆ ಕ್ರಮಗಳನ್ನು ಅನುಸರಿಸುವಂತೆ ಅಧಿಕಾರಿಗಳಿಗೆ ಗುಂಡೂರಾವ್ ಸೂಚನೆ

ಎಚ್ಚರಿಕೆ ಕ್ರಮಗಳನ್ನು ಅನುಸರಿಸುವಂತೆ ಅಧಿಕಾರಿಗಳಿಗೆ ಗುಂಡೂರಾವ್ ಸೂಚನೆ
ಬೆಂಗಳೂರು , ಗುರುವಾರ, 14 ಸೆಪ್ಟಂಬರ್ 2023 (12:26 IST)
ಬೆಂಗಳೂರು : ನೆರೆಯ ರಾಜ್ಯ ಕೇರಳದಲ್ಲಿ ನಿಫಾ ವೈರಸ್ನಿಂದಾಗಿ ವ್ಯಕ್ತಿಯೊಬ್ಬರು ಮೃತಪಟ್ಟಿರುವುದು ದೃಢಪಟ್ಟಿದೆ.

ಇದರ ಬೆನ್ನಲ್ಲೇ ಕರ್ನಾಟಕದಲ್ಲೂ ರೋಗದ ಭೀತಿ ಹುಟ್ಟಿಕೊಂಡಿದ್ದು, ಅದು ಹರಡದಂತೆ ಎಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲು ಕರ್ನಾಟಕದ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

1. ನಿಫಾ ವೈರಸ್ ನಿಂದ ಉಂಟಾಗಬಹುದಾದ ಪರಿಣಾಮಗಳನ್ನು ಗಮನದಲ್ಲಿಟ್ಟುಕೊಂಡು, ರಾಜ್ಯದ ಕೇರಳ ಗಡಿ ಪ್ರದೇಶಗಳಲ್ಲಿ ಎಚ್ಚರಿಕೆ ಮತ್ತು ಜಾಗರೂಕತೆ ಕ್ರಮವಹಿಸುವಂತೆ ಪ್ರಧಾನ ಕಾರ್ಯದರ್ಶಿಗಳು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಿಕಾಸ ಸೌಧ ಬೆಂಗಳೂರು ಇವರಿಗೆ ಸೂಚಿಸಿದೆ.

2. ನಿಫಾ ವೈರಸ್ ನಿರ್ವಹಣೆಗೆ ಸಂಬಂಧಿಸಿದಂತೆ ಜಿಲ್ಲಾ ಕ್ಷಿಪ್ರ ಪ್ರತಿಕ್ರಿಯೆ ತಂಡದ ಸಭೆಯನ್ನು ನಡೆಸಲು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಅಗತ್ಯ ಕ್ರಮವಹಿಸುವಂತೆ ಸೂಚಿಸಲಾಗಿದೆ. 

3. ದಕ್ಷಿಣ ಕನ್ನಡದ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆರೋಗ್ಯ ಸಂಸ್ಥೆಗಳು ನಿಫಾ ಶಂಕಿತ ಪಕರಣಗಳನ್ನು ದಾಖಲಿಸಿಕೊಂಡು, ಕೂಡಲೇ ಜಿಲ್ಲಾ ಕಾವಲು ಕಛೇರಿ/ಘಟಕಕ್ಕೆ ತಿಳಿಸಬೇಕು.

4. ಜಿಲ್ಲಾ ಆಸ್ಪತ್ರೆ, ತಾಲೂಕು ಆಸ್ಪತ್ರೆಗಳು ಮತ್ತು ಎಲ್ಲಾ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ನಿಫಾ ವೈರಸ್ ನಿರ್ವಹಣೆಗಾಗಿ 10 ಹಾಸಿಗೆಗಳ ಪ್ರತ್ಯೇಕ ವಾರ್ಡ್ ಅನ್ನು ಕಾಯ್ದಿರಿಸುವಂತೆ ಹಾಗೂ ಆಮ್ಲಜನಕ ಮತ್ತು ಇತರ ಅಗತ್ಯ ಔಷಧಿಗಳನ್ನೊಳಗೊಂಡಂತೆ ಎಲ್ಲಾ ಪಿಎಚ್ ವೈದ್ಯಾಧಿಕಾರಿಗಳಿಗೆ ಜ್ವರದ ಕಣಾವಲು ಘಟಕಗಳನ್ನು ಬಲಪಡಿಸಲು ಸೂಚಿಸಿದೆ. ಅಲ್ಲದೆ ಅಗತ್ಯವಿರುವ ಔಷಧಿಗಳನ್ನು ಶೇಖರಿಸಿಟ್ಟುಕೊಳ್ಳಲು ಮತ್ತು ನಿಫಾ ರೋಗಲಕ್ಷಣಗಳಿಗೆ ಕ್ಷೇತ್ರ ಸಿಬ್ಬಂದಿಗೆ ತರಬೇತಿ ನೀಡುವ ವ್ಯವಸ್ಥೆ ಮಾಡಬೇಕು.

5. ಸಾರ್ಜನಿಕರಿಗೆ ಈ ಬಗ್ಗೆ ತಿಳುವಳಿಕೆ ನೀಡಲು, ಅರಿವು ಮೂಡಿಸಲು, ಜಾಗೃತವಹಿಸಲು ಸೂಕ್ತ ವ್ಯವಸ್ಥೆಯನ್ನು ಕಲ್ಪಿಸಲು ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಭೀಕರ ಪ್ರವಾಹದಲ್ಲಿ 5,300 ಜನರ ದುರ್ಮರಣ