Publish Date: Sun, 08 Apr 2018 (07:35 IST)
Updated Date: Sun, 08 Apr 2018 (07:39 IST)
ಯಾದಗಿರಿ : 'ಚುನಾವಣೆಯಲ್ಲಿ ಜೆಡಿಎಸ್ ಸ್ಪಷ್ಟ ನಿಲುವು ಹೊಂದಿಲ್ಲ ‘ಎಂದು ರಾಹುಲ್ ಗಾಂಧಿ ಅವರು ಟೀಕಿಸಿದ್ದಕ್ಕೆ ಕೋಪಗೊಂಡ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಈ ಬಗ್ಗೆ ಮಾತನಾಡಿದ ಎಚ್.ಡಿ.ಕುಮಾರಸ್ವಾಮಿ ಅವರು,’ 'ಚುನಾವಣೆಯಲ್ಲಿ ಜೆಡಿಎಸ್ ಸ್ಪಷ್ಟ ನಿಲುವು ಹೊಂದಿಲ್ಲ ಎಂದು ರಾಹುಲ್ ಟೀಕಿಸಿದ್ದಾರೆ. ನನ್ನ ಪಕ್ಷವನ್ನು ಟೀಕಿಸಲು ಅವರಿಗೇನು ಅಧಿಕಾರ ಇದೆ. ರಾಹುಲ್ ಗಾಂಧಿ ಕೇಳಿದ್ದಕ್ಕೆಲ್ಲ ಉತ್ತರಿಸಲು ನಾನೇನು ಅವರ ಗುಲಾಮನಲ್ಲ. ನಾನು ಈ ರಾಜ್ಯದ 6 ಕೋಟಿ ಜನರ ಗುಲಾಮ. ಜನರು ಪ್ರಶ್ನಿಸಲಿ. ಜೆಡಿಎಸ್ ಸ್ಪಷ್ಟ ನಿಲುವೇನು? ಎಂಬುದರ ಬಗ್ಗೆ ಜನರಿಗೆ ಉತ್ತರಿಸುತ್ತೇನೆ. ಐದು ವರ್ಷದ ಅಧಿಕಾರಾವಧಿಯಲ್ಲಿ ಕಾಂಗ್ರೆಸ್ ಏನು ಸಾಧಿಸಿದೆ ಎಂಬುದನ್ನು ತೋರಿಸಲಿ. ರಾಷ್ಟ್ರೀಯ ಪಕ್ಷವಾಗಿರುವ ಕಾಂಗ್ರೆಸ್ ಪ್ರಾದೇಶಿಕ ಪಕ್ಷಗಳ ಸರ್ವನಾಶಕ್ಕೆ ನಿಂತಿದೆ’ ಎಂದು ರಾಹುಲ್ ಗಾಂಧಿ ವಿರುದ್ಧ ಕಿಡಿಕಾರಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ