Publish Date: Tue, 06 Dec 2022 (19:52 IST)
Updated Date: Tue, 06 Dec 2022 (19:54 IST)
ತಿಪಕ್ಷ ನಾಯಕ ಸಿದ್ದರಾಮಯ್ಯ ನಿವಾಸಕ್ಕೆ ವಿಧಾನ ಪರಿಷತ್ ಸದಸ್ಯ ಹೆಚ್ ವಿಶ್ವನಾಥ್ ಭೇಟಿ ನೀಡಿದ್ದು, ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಅಲ್ಲದೆ ನಿನ್ನೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇಂದು ಸಿದ್ದರಾಮಯ್ಯ ಭೇಟಿ ಈ ನಡೆ ನೋಡ್ತಾಯಿದ್ರೆ ಬಿಜೆಪಿ ನಾಯಕರ ನಡೆಯಿಂದ ಬೇಸತ್ತಿರುವ ಹೆಚ್ ವಿಶ್ವನಾಥ್ ಕಾಂಗ್ರೆಸ್‌ಗೆ ಮರಳಲು ನಿರ್ಧರಿಸಿದ್ರಾ ಎಂಬ ಮಾತು ರಾಜಕೀಯ ವಲಯದಲ್ಲಿ ಚರ್ಚೆ ಆಗುತ್ತಿದೆ. ಈ ಬಗ್ಗೆ ಮಾತನಾಡಿದ ಎಚ್ ವಿಶ್ವನಾಥ್ ಇಂದು ಸಿದ್ದರಾಮಯ್ಯ ಭೇಟಿ ಮಾಡಿದ್ದೇನೆ ಅವರ ಆರೋಗ್ಯವನ್ನು ವಿಚಾರಿಸುವುದಕ್ಕೆ ಬಂದಿದ್ದೆ ವಿಚಾರಿಸಿದ್ದೇನೆ. ಇನ್ನೂ ಮಲ್ಲಿಕಾರ್ಜುನ ಖರ್ಗೆ ಭೇಟಿ ಬಗ್ಗೆ ಮಾತನಾಡಿ ಮಲ್ಲಿಕಾರ್ಜುನ ಖರ್ಗೆ ಅವರನ್ನ ಅಭಿಮಾನದಿಂದ ಭೇಟಿ ಮಾಡಿ ಶುಭ ಹಾರೈಸಿದ್ದೇನೆ ಯಾವುದೇ ವಿಚಾರ ಚರ್ಚಿಸಿಲ್ಲ ಎಂದು ಹೇಳಿದರು.