Publish Date: Tue, 03 Sep 2019 (17:39 IST)
Updated Date: Tue, 03 Sep 2019 (17:41 IST)
ಕೇಂದ್ರ ಸರಕಾರ ಹಾಗೂ ರಾಜ್ಯದ ಬಿಜೆಪಿ ಸರಕಾರದವರು ಇಡಿ ಹಾಗು ಐಟಿಯನ್ನು ದುರ್ಬಳಕೆ ಮಾಡಿಕೊಂಡು ಡಿಕೆಶಿ ಅವರಿಗೆ ಕಿರುಕುಳ ನೀಡುತ್ತಿದ್ದಾರೆಂದು ಕಾಂಗ್ರೆಸ್ ಕಾರ್ಯಕರ್ತರು ದೂರಿದ್ದಾರೆ.
ಬಿಜೆಪಿಯ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ಇಡಿ ಹಾಗು ಐಟಿ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ದ್ವೇಷದ ರಾಜಕಾರಣ ಮಾಡುತ್ತಿವೆ. ಆ ಮೂಲಕ ಡಿ.ಕೆ. ಶಿವಕುಮಾರ್ ಅವರಿಗೆ ಇಡಿ ಅಧಿಕಾರಿಗಳಿಂದ ಕಿರುಕುಳ ನೀಡಲಾಗುತ್ತಿದೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರು ರಸ್ತೆ ತಡೆ ನಡೆಸಿದ್ರು.
ಪ್ರಧಾನಿ ನರೇಂದ್ರ ಮೋದಿ ಹಾಗು ಅಮಿತ್ ಶಾ ಭಾವಚಿತ್ರಕ್ಕೆ ಚಪ್ಪಲಿಯಲ್ಲಿ ಹೊಡೆದು ಬೆಂಕಿ ಹಚ್ಚುವ ಮೂಲಕ ಪ್ರತಿಭಟನೆ ನಡೆಸಿದ್ದಾರೆ, ಬೆಂಗಳೂರು ಹೊರವಲಯ ಆನೇಕಲ್ ಕಾಂಗ್ರೆಸ್ ಘಟಕದ ವತಿಯಿಂದ ಪ್ರತಿಭಟನೆ ಹಮ್ಮಿಕೊಂಡಿದ್ದು ಆನೇಕಲ್ ನ ದೇವರ ಕೊಂಡಪ್ಪ ವೃತ್ತದಲ್ಲಿ ರಸ್ತೆ ತಡೆ ನಡೆಸಲಾಯಿತು.
ಗಾಂಧಿ ವೃತ್ತದ ವರೆಗೆ ಮೆರವಣಿಗೆ ಮೂಲಕ ನೂರಾರು ಕಾರ್ಯಕರ್ತರು ಮುಖಂಡರು ಭಾಗಿಯಾಗಿ ಬಿಜೆಪಿಯವರ ವಿರುದ್ಧ ಧಿಕ್ಕಾರ ಕೂಗಿದ್ರು.