Select Your Language

Notifications

webdunia
webdunia
webdunia
webdunia

ಕಳಪೆ ಆಹಾರ ಪದಾರ್ಥ ಪೂರೈಕೆ ಮಾಡಿದ್ರೆ ಕಠಿಣ ಕ್ರಮ : ಲಕ್ಷ್ಮಿ ಹೆಬ್ಬಾಳ್ಕರ್

ಕಳಪೆ ಆಹಾರ ಪದಾರ್ಥ ಪೂರೈಕೆ ಮಾಡಿದ್ರೆ ಕಠಿಣ ಕ್ರಮ : ಲಕ್ಷ್ಮಿ ಹೆಬ್ಬಾಳ್ಕರ್
ಬೆಂಗಳೂರು , ಶನಿವಾರ, 15 ಜುಲೈ 2023 (09:17 IST)
ಬೆಂಗಳೂರು : ಅಂಗನವಾಡಿ ಕೇಂದ್ರಗಳಿಗೆ ಕಳಪೆ ಆಹಾರ ಪೂರೈಕೆ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಎಚ್ಚರಿಕೆ ನೀಡಿದರು.
 
ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ನಾರಾಯಣಸ್ವಾಮಿ ವಿಷಯ ಪ್ರಸ್ತಾಪ ಮಾಡಿದರು. ಅಂಗನವಾಡಿ ಕೇಂದ್ರಗಳಲ್ಲಿ ಆಹಾರ ಪದಾರ್ಥಗಳ ಕಳಪೆ ಗುಣಮಟ್ಟದ ಪೂರೈಕೆಯಲ್ಲಿ ಆಗುತ್ತಿದೆ. ಇದೊಂದು ದೊಡ್ಡ ಮಾಫಿಯಾ ಇದೆ. ಇದರಲ್ಲಿ ಅಧಿಕಾರಿಗಳು ಶಾಮೀಲಾಗಿದ್ದಾರೆ. ಕೂಡಲೇ ಇಂತಹ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಅಂತ ನಾರಾಯಣಸ್ವಾಮಿ ಆಗ್ರಹಿಸಿದರು. 

ಇದಕ್ಕೆ ಉತ್ತರಿಸಿದ ಸಚಿವೆ, ರಾಜ್ಯದಲ್ಲಿ 67,570 ಅಂಗನವಾಡಿ ಕೇಂದ್ರಗಳು ಮತ್ತು 2,329 ಮಿನಿ ಅಂಗನವಾಡಿ ಕೇಂದ್ರಗಳು ಸೇರಿ ಒಟ್ಟು 69,899 ಅಂಗನವಾಡಿ ಕೇಂದ್ರಗಳಿವೆ. 39,50,179 ಮಕ್ಕಳು ಇಲ್ಲಿ ದಾಖಲಾಗಿ ಸೌಲಭ್ಯ ಪಡೆಯುತ್ತಿದ್ದಾರೆ. ಅಂಗನವಾಡಿ ಕೇಂದ್ರಗಳಿಗೆ ಪೂರೈಕೆ ಆಗುವ ಆಹಾರ ಪದಾರ್ಥ ಕಳಪೆ ಗುಣಮಟ್ಟ ಆಗಿರೋದು ಗಮನಕ್ಕೆ ಬಂದಿದೆ.

ಕಲಬುರಗಿಯಲ್ಲಿ ಇಂತಹ ಕೇಸ್ ಗಮನಕ್ಕೆ ಬಂದಿದೆ. ಈ ಕೇಂದ್ರಕ್ಕೆ ನೊಟೀಸ್ ನೀಡಲಾಗಿದೆ. ಕಳಪೆ ಮೊಟ್ಟೆ ಪ್ರಕರಣಗಳೂ ನನ್ನ ಗಮನಕ್ಕೆ ಬಂದಿದೆ. ಈ ಬಗ್ಗೆ ಸಂಪೂರ್ಣ ವರದಿ ತರಿಸಿಕೊಂಡಿದ್ದು, ಸೂಕ್ತ ಕ್ರಮ ಕೈಗೊಳ್ಳುತ್ತೇನೆ ಎಂದು ಭರವಸೆ ನೀಡಿದರು. 

Share this Story:

Follow Webdunia kannada

ಮುಂದಿನ ಸುದ್ದಿ

ಫಾಕ್ಸ್‌ಕಾನ್ ಕಂಪನಿಗೆ 300 ಎಕರೆ ಹಸ್ತಾಂತರ : ಎಂಬಿ ಪಾಟೀಲ್