Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಶಿವಮೊಗ್ಗದ ಹರ್ಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಹಲವು ಆರೋಪಿಗಳನ್ನು ಬಂಧಿಸಲಾಗಿದೆ. ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ತನಿಖೆ ತೀವ್ರವಾಗಿ ನಡೆಯುತ್ತಿದೆ. ಅದರ ಆಧಾರದ ಮೇಲೆ ಮುಂದಿನ ತನಿಖೆಯನ್ನು ಯಾವ ಸಂಸ್ಥೆಗೆ ನೀಡಬೇಕೆನ್ನುವುದು ನಿರ್ಧಾರವಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಈ ವಿಷಯ ತಿಳಿಸಿದರು.
ಶಿವಮೊಗ್ಗದಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಶಾಂತಿ ಕಾಪಾಡುವುದು ನಮ್ಮ ಆದ್ಯತೆಯಾಗಿದೆ. ಕರ್ಫ್ಯೂ ಸಹ ಜಾರಿಯಲ್ಲಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.
ಕಾಂಗ್ರೆಸ್ ಅನುಭವದ ಮಾತು: ಇದು ಸರಕಾರಿ ಪ್ರಾಯೋಜಿತ ಮೆರವಣಿಗೆ, ಸೆಕ್ಷನ್ 144 ಉಲ್ಲಂಘನೆಯಾಗಿದೆ ಎಂದು ಕಾಂಗ್ರೆಸ್ ಆರೋಪ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ, ಕಾಂಗ್ರೆಸ್ ನವರು ಈ ಹಿಂದೆ ಸರಕಾರಿ ಪ್ರಾಯೋಜಿತ ಕೆಲಸಗಳನ್ನು ಮಾಡಿದ್ದಾರೆ. ಅದರ ಅನುಭವದಿಂದ ಆ ಮಾತುಗಳು ಆಡಿದ್ದಾರೆ ಎಂದು ತಿರುಗೇಟು ನೀಡಿದರು.