ಪ್ರಾರ್ಥನಾ ಮಂದಿರಗಳನ್ನು ಹೊರತುಪಡಿಸಿ ಪ್ರತೀ ಶುಕ್ರವಾರ ರಸ್ತೆಗಳಲ್ಲಿ ನಮಾಜ್ ಮಾಡುತ್ತ ಸಾರ್ವಜನಿಕರ ಸಂಚಾರಕ್ಕೆ ಅಡ್ಡಿಪಡಿಸುತ್ತಿರುವವರಿಗೆ ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಖಡಕ್ ಸಂದೇಶ ರವಾನಿಸಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ಶುಕ್ರವಾರ ಸಾರ್ವಜನಿಕ ಪ್ರದೇಶಗಳಲ್ಲಿ ಸಲ್ಲಿಸುವ ನಮಾಜ್ ಅನ್ನು ನಾವು ಯಾವುದೇ ಕಾರಣಕ್ಕೂ ಸಹಿಸಲಾಗುವುದಿಲ್ಲ. ತಮ್ಮ ನಿರ್ಧಿಷ್ಟ ಪ್ರಾರ್ಥನಾ ಮಂದಿರಗಳಲ್ಲೇ ನಮಾಜ್ ಮಾಡಬೇಕು ಎಂದು ಎಚ್ಚರಿಕೆ ನೀಡಿದ್ದಾರೆ.
ಈಗಾಗಲೇ ಕೆಲವು ತಿಂಗಳಿನಿಂದ ಗುರುಗಾವ್ ನಲ್ಲಿ ಶುಕ್ರವಾರದ ನಮಾಜ್ ಪ್ರಾರ್ಥನೆ ನಡೆಯುತ್ತಿದೆ. ಇದು ಸಾರ್ವಜನಿಕರಿಗೆ ತೊಂದರೆಯನ್ನುಂಟು ಮಾಡಿದೆ. ಈ ನಿಟ್ಟಿನಲ್ಲಿ ಶೀಘ್ರದಲ್ಲಿ ಸಮಸ್ಯೆ ಪರಿಹರಿಸಲು ಜಿಲ್ಲಾಧಿಕಾರಿಗಳಿಗೆ ಹಾಗೂ ಪೊಲೀಸರಿಗೆ ಸೂಚಿಸಲಾಗಿದೆ ಎಂದರು.
ಮನೆಗಳಲ್ಲಿ, ಧಾರ್ಮಿಕ ಸ್ಥಳಗಳಲ್ಲಿ ನಮಾಜ್, ಪೂಜೆ ಮಾಡುವುದರಿಂದ ಯಾವುದೇ ಸಮಸ್ಯೆ ಇಲ್ಲ. ಆದರೆ ಇಂತಹ ಆಚರಣೆಗಳು ಸಾರ್ವಜನಿಕರಿಗೆ ತೊಂದರೆ ಮಾಡಿದರೆ ಸರ್ಕಾರ ಸಹಿಸುವುದಿಲ್ಲ ಎಂದರು