Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಎಸ್‌ಟಿಪಿ ದುರಂತ ಸ್ಥಳಕ್ಕೆ ಭೇಟಿ ನೀಡಿದೋರಾರು?

ಎಸ್‌ಟಿಪಿ ದುರಂತ ಸ್ಥಳಕ್ಕೆ ಭೇಟಿ ನೀಡಿದೋರಾರು?
ಬೆಂಗಳೂರು , ಗುರುವಾರ, 20 ಜೂನ್ 2019 (14:41 IST)
ಹೆಬ್ಬಾಳದ ಎಸ್‌ಟಿಪಿ ದುರಂತದ ಸ್ಥಳಕ್ಕೆ ಡಿಸಿಎಂ ಭೇಟಿ ನಿಡಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳೋದಾಗಿ ಎಚ್ಚರಿಕೆ ನೀಡಿದ್ದಾರೆ.

ಹೆಬ್ಬಾಳದ ಎಸ್‌ಟಿಪಿ ದುರಂತ ಸಂಬಂಧ ಈಗಾಗಲೇ ತನಿಖೆ ನಡೆಸಲಾಗುತ್ತಿದ್ದು, ವರದಿ ಬಂದ ಬಳಿಕ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಹೇಳಿದ್ರು.

ಹೆಬ್ಬಾಳದ ಎಸ್‌ಟಿಪಿ ದುರಂತದ ಸ್ಥಳಕ್ಕೆ ಭೇಟಿ ನೀಡಿದ ಅವರು, ಸ್ಥಳ ಪರಿಶೀಲನೆ‌ ಮಾಡಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡ್ರು.  

ಎಸ್‌ಟಿಪಿ ನಿರ್ಮಾಣದ ಹಂತದ ವೇಳೆ ಮೂರು ಜನ ಎಂಜಿನಿರ್ಸ್‌ ಸಾವನ್ನಪ್ಪಿರುವ ಘಟನೆ ಅತ್ಯಂತ ದುರದೃಷ್ಟಕರ. ಅವರ ಆತ್ಮಕ್ಕೆ ಶಾಂತಿ ದೊರೆಯಲಿದೆ. ಅವರ ಕುಟುಂಬ ವರ್ಗಕ್ಕೆ ಇಲಾಖೆಯಿಂದ ಪರಿಹಾರ ನೀಡುವ ಸಂಬಂಧ ತೀರ್ಮಾನ ತೆಗೆದುಕೊಳ್ಳಲಾಗುವುದು. ಹೆಬ್ಬಾಳದಲ್ಲಿ ನಿರ್ಮಾಣವಾಗುತ್ತಿರುವ ಎಸ್‌ಟಿಪಿ ಎರಡನೇ ಅತಿ ದೊಡ್ಡ ಎಸ್‌ಟಿಪಿ ಆಗಿದೆ. ಶೀಘ್ರವೇ ಕಾಮಗಾರಿ ಪೂರ್ಣಗೊಳಿಸಲು ಎಲ್ಲಾ ರೀತಿಯ ನಿರ್ದೇಶನ ನೀಡಲಾಗಿತ್ತು. ಈ ಅವಧಿಯಲ್ಲಿ ಇಂಥ ಘಟನೆ  ನಡೆದಿದ್ದು ಬೇಸರ ತರಿಸಿದೆ ಎಂದ್ರು.  

ಬೆಳಂದೂರು ಬಳಿ ಇರುವ ಎಸ್‌ಟಿಪಿಯಿಂದ ನೀರು ಶುದ್ದೀಕರಿಸಲಾಗಿತ್ತಿದೆ.‌ ಅದೇ ಮಾದರಿಯಲ್ಲಿ ಹೆಬ್ಬಾಳದಲ್ಲಿಯೂ ಮಾಡಲಾಗುತ್ತಿದ್ದು, ಇದಕ್ಕಾಗಿ 365 ಕೋಟಿ ರು. ವೆಚ್ಚ ಮಾಡಲಾಗುತ್ತಿದೆ. ಇನ್ನು ಸಾಕಷ್ಟು ಕಾಮಗಾರಿ ಪೂರ್ಣಗೊಳ್ಳುವುದು ಬಾಕಿ ಇದ್ದು, ಈ ಎಲ್ಲವೂ ಅತಿ ಎಚ್ಚರಿಕೆಯಿಂದ ಮಾಡಲು ಸೂಚಿಸಿರುವುದಾಗಿ ಹೇಳಿದ್ರು.

 

Share this Story:

Follow Webdunia kannada

ಮುಂದಿನ ಸುದ್ದಿ

'ಸಿದ್ದರಾಮಯ್ಯ ಸ್ಥಿತಿ ಅತಂತ್ರ; ಕಾಂಗ್ರೆಸ್ ಛಿದ್ರ'