ಬಳ್ಳಾರಿ : ರಾಹುಲ್ ಗಾಂಧಿ ಪ್ರಧಾನಿಯಾಗುವ ವಿಚಾರಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಪ್ರಧಾನಿಯಾಗುವುದಕ್ಕೆ ನನ್ನ ಬೆಂಬಲವಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಹೇಳಿದ್ದಾರೆ.
ಬಳ್ಳಾರಿಯಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು,’’ಮೋದಿ ಸರ್ಕಾರ ಕಿತ್ತೋಗೆಯಲು ನಾವೆಲ್ಲ ಒಟ್ಟಾಗಿದ್ದೇವೆ. ಆದಕಾರಣ ರಾಹುಲ್ ಗಾಂಧಿ ಪ್ರಧಾನಿಯಾಗುವುದಕ್ಕೆ ನನ್ನ ಬೆಂಬಲವಿದೆ’ ಎಂದು ಹೇಳಿದ್ದಾರೆ.
ಅಲ್ಲದೇ “ ಎರಡು ಪಕ್ಷದ ಮುಖಂಡರು ಸೇರಿ ಬಳ್ಳಾರಿ ಅಭ್ಯರ್ಥಿ ಆಯ್ಕೆ ಮಾಡಿದ್ದೇವೆ. ಸಾರ್ವತ್ರಿಕ ಚುನಾವಣೆ ಎಂದು ಪರಿಗಣಿಸಿ ಕೆಲಸ ಹೋರಾಟ ಮಾಡುತ್ತೀದ್ದೇವೆ. ಭಿನ್ನಾಭಿಪ್ರಾಯಕ್ಕೆ ಅವಕಾಶ ನೀಡದೆ ಒಗ್ಗಟ್ಟಾಗಿ ಹೋರಾಟ ಮಾಡುತ್ತೇವೆ. 5 ಕ್ಷೇತ್ರಗಳ ಗೆಲುವಿಗಾಗಿಹೋರಾಟ ನಡೆಸುತ್ತಿದ್ದೇವೆ. 13 ಉಪ ಚುನಾವಣೆಯಲ್ಲಿ 12 ಬಿಜೆಪಿಯೇತರ ಪಕ್ಷಗಳು ಗೆದ್ದಿವೆ. ಬಿಜೆಪಿಯನ್ನು ದೂರವಿಡಲು ನಾವು ಒಟ್ಟಾಗಿದ್ದೇವೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.