ಬೆಂಗಳೂರು: ಶಾಸಕರ ಬಂಡಾಯದಿಂದಾಗಿ ಸಮ್ಮಿಶ್ರ ಸರ್ಕಾರ ತೂಗುಯ್ಯಾಲೆಯಲ್ಲಿದ್ದರೆ, ಸಿಎಂ ಕುಮಾರಸ್ವಾಮಿ ಮತ್ತು ಜೆಡಿಎಸ್ ನಾಯಕರೊಂದಿಗೆ ಸಭೆ ನಡೆಸಿರುವ ಎಚ್ ಡಿ ದೇವೇಗೌಡರು ಹೊಸ ತಂತ್ರ ಹೆಣೆದಿದ್ದಾರೆ ಎನ್ನಲಾಗಿದೆ.
ಸರ್ಕಾರ ಉಳಿಸಲು ಕಡೇ ಪ್ರಯತ್ನವಾಗಿ ದೇವೇಗೌಡರು ಸಿಎಂ ಸ್ಥಾನವನ್ನು ಕಾಂಗ್ರೆಸ್ ಗೆ ಬಿಟ್ಟುಕೊಟ್ಟು ಡಿಸಿಎಂ ಸ್ಥಾನ ಉಳಿಸಿಕೊಳ್ಳುವ ಬಗ್ಗೆ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ ಗೆ ಸಿಎಂ ಸ್ಥಾನ ಬಿಟ್ಟುಕೊಟ್ಟರೆ ಅಸಮಾಧಾನಿತ ಕಾಂಗ್ರೆಸ್ ಶಾಸಕರು ರಾಜೀನಾಮೆ ಹಿಂತೆಗೆದುಕೊಳ್ಳಬಹುದು.
ಇನ್ನೊಂದು ಮೂಲಗಳ ಪ್ರಕಾರ, ಕಾಂಗ್ರೆಸ್ ಗೆ ಬಾಹ್ಯ ಬೆಂಬಲ ನೀಡಿ ಸರ್ಕಾರ ಉಳಿಸಿಕೊಳ್ಳಲು ಜೆಡಿಎಸ್ ನಾಯಕರು ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ. ಹೇಗಾದರೂ ಮಾಡಿ ಸರ್ಕಾರ ಉಳಿಸಿಕೊಳ್ಳಲು ಕೊನೆ ಪ್ರಯತ್ನ ಮಾಡುತ್ತಿದ್ದಾರೆ ಜೆಡಿಎಸ್ ವರಿಷ್ಠರು. ಆದರೆ ಈ ತಂತ್ರ ಸಫಲವಾಗುತ್ತಾ ಕಾದು ನೋಡಬೇಕು.