ಬೆಂಗಳೂರು: ಸರ್ಕಾರ ಖಾಸಗಿ ಆಸ್ಪತ್ರೆಗಳಿಗೆ ಕಡಿವಾಣ ಹಾಕಲು ಖಾಸಗಿ ವೈದ್ಯಕೀಯ ಖಾಯಿದೆ ತರಲುದ್ದೇಶಿಸಿರುವ ಬೆನ್ನಲ್ಲೇ ವೈದ್ಯರು ಮುಷ್ಕರ ಆರಂಭಿಸಿದ್ದಾರೆ. ಮುಷ್ಕರ ಆರಂಭಿಸಿರುವ ವೈದ್ಯರ ಪರ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಮಾತನಾಡಿದ್ದಾರೆ.
ಖಾಸಗಿ ಆಸ್ಪತ್ರೆಗಳ ಅಭಿಪ್ರಾಯಕ್ಕೆ ಮನ್ನಣೆ ಕೊಡದೇ ಸಚಿವ ರಮೇಶ್ ಕುಮಾರ್ ಏಕಾಏಕಿ ದರ ನಿಗದಿಗೊಳಿಸಲು ಮುಂದಾಗಿರುವುದು ಅವೈಜ್ಞಾನಿಕ. ಸಚಿವರು ತುಘಲಕ್ ದರ್ಬಾರ್ ನಡೆಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ ಈ ರೀತಿಯ ತೀರ್ಮಾನ ಕೈಗೊಳ್ಳುವ ಮೊದಲು ಸಚಿವರು ಖಾಸಗಿ ವೈದ್ಯರೊಂದಿಗೆ ಚರ್ಚಿಸಬೇಕಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ.