Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಚಾಮರಾಜಪೇಟೆಯ ಕೊಲೆ ಪ್ರಕರಣದಲ್ಲಿ ಪೋಲಿಸ್ ಅಧಿಕಾರಿ ಕಮಲ್ ಪಂಥ್ ಅವರನ್ನು ಅವಮಾನ ಮಾಡಿದ ಬಿಜೆಪಿ ನಾಯಕರಿಗೆ ಬುದ್ಧಿ ಕಲಿಸಲು ಪೋಲಿಸ್ ಇಲಾಖೆ ಪಿಎಸ್‌ಐ ನೇಮಕಾತಿ ಹಗರಣವನ್ನು ಬಯಲಿಗೆಳೆದಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದರು. ಚಾಮರಾಜಪೇಟೆಯಲ್ಲಿ ನಡೆದ ಘಟನೆಗೂ ಇದಕ್ಕೂ ಸಂಬಂಧ ಇದೆ, ಪಿಎಸ್‌ಐ ಹಗರಣದ ಹಿಂದೆ ದೊಡ್ಡ ಕಥೆಯೇ ಇದೇ ಎಂದು ಮಾಜಿ ಸಿಎಂ HDK ಘಟನೆಯ ಒಳ ಸುಳಿಯನ್ನು ಬಿಚ್ಚಿಟ್ಟರು. ಬಿಜೆಪಿಯ ಒಬ್ಬ ವಕ್ತಾರ ಕಮಲ್ ಪಂಥ್ ವಿರುದ್ಧ ಚಾಮರಾಜಪೇಟೆಯ ಗೋರಿ ಪಾಳ್ಯದಲ್ಲಿ ಮಧ್ಯ ರಾತ್ರಿ ನಡೆದ ಕೊಲೆಯ ವಿಚಾರವಾಗಿ ಆರೋಪ ಮಾಡಿದ್ದರು. ಪೊಲೀಸ್ ಇಲಾಖೆ ಯುವಕನ ಕೊಲೆ ನಡೆಯಲು ಆಕ್ಸಿಡೆಂಟ್ ಕಾರಣ ಎಂದು ಹೇಳಿತ್ತು. ಆದರೆ ಬಿಜೆಪಿ ನಾಯಕರು ಉರ್ದು ಭಾಷೆಯಲ್ಲಿ ಮಾತನಾಡಲಿಲ್ಲ ಎಂಬ ವಿಚಾರವಾಗಿ ಗಲಾಟೆಯಾಗಿ ಕೊಲೆಯಾಯ್ತು ಎಂದು ಕಥೆ ಕಟ್ಟಿದ್ದರು. ಆ ಘಟನೆ ಹಿನ್ನೆಲೆಯಲ್ಲಿ ಪಿಎಸ್‌ಐ ಹಗರಣ ಲಿಂಕ್ ಆಗಿದೆ ಎಂದರು.