Webdunia - Bharat's app for daily news and videos

Install App

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಎಚ್ ಡಿ ರೇವಣ್ಣ ಜಾಮೀನು ಇಂದು ನಿರ್ಧಾರ

Krishnaveni K
ಶುಕ್ರವಾರ, 17 ಮೇ 2024 (10:00 IST)
ಬೆಂಗಳೂರು: ಮನೆಕೆಲಸದಾಕೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಕ್ಕೊಳಗಾಗಿರುವ ಮಾಜಿ ಸಚಿವ ಎಚ್ ಡಿ ರೇವಣ್ಣ ಜಾಮೀನು ಅರ್ಜಿ ಇಂದು ನಿರ್ಧಾರವಾಗಲಿದೆ. ನಿನ್ನೆ ಅವರಿಗೆ ಒಂದು ದಿನದ ಮಟ್ಟಿಗೆ ಮಧ‍್ಯಂತರ ಜಾಮೀನು ಸಿಕ್ಕಿತ್ತು.

ಇದಕ್ಕೆ ಮೊದಲು ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರನ್ನು ಎಸ್ಐಟಿ ತಂಡ ಬಂಧಿಸಿತ್ತು. 11 ದಿನಗಳ ಕಾಲ ನ್ಯಾಯಾಂಗ ಬಂಧನ ಅನುಭವಿಸಿದ್ದ ರೇವಣ್ಣ ಮೊನ್ನೆಯಷ್ಟೇ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಇದರ ನಡುವೆ ಅವರು ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲೂ ಆರೋಪಿಯಾಗಿದ್ದರು.

ಆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಅವರಿಗೆ ಒಂದು ದಿನದ ಮಟ್ಟಿಗೆ ರಿಲೀಫ್ ನೀಡಿತ್ತು. ಇಂದು ಎಸಿಎಂಎಂ ಕೋರ್ಟ್ ನಲ್ಲಿ ಜಾಮೀನು ಅರ್ಜಿ ವಿಚಾರಣೆಗೆ ಬರಲಿದೆ.  ನಿನ್ನೆ ಮಧ‍್ಯಂತರ ಜಾಮೀನು ಪಡೆದ ಬಳಿಕ ನಿರಾಳರಾದಂತೆ ಕಂಡುಬಂದಿದ್ದ ರೇವಣ್ಣ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದ್ದರು.

ಇದೇ ಪ್ರಕರಣದಲ್ಲಿ ಅವರ ಪುತ್ರ ಪ್ರಜ್ವಲ್ ರೇವಣ್ಣ ಕೂಡಾ ಪ್ರಮುಖ ಆರೋಪಿಯಾಗಿದ್ದಾರೆ. ಅವರು ವಿದೇಶದಲ್ಲಿ ತಲೆಮರೆಸಿಕೊಂಡಿದ್ದು ಇದುವರೆಗೆ ಎಸ್ಐಟಿ ವಿಚಾರಣೆಗೆ ಹಾಜರಾಗದೇ ತಪ್ಪಿಸಿಕೊಳ್ಳುತ್ತಿದ್ದಾರೆ. ಪ್ರಜ್ವಲ್ ವಿರುದ್ಧ ರೇಪ್ ಕೇಸ್ ಕೂಡಾ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ