Webdunia - Bharat's app for daily news and videos

Install App

ನನ್ನನ್ನು ಯಾರೂ ಅಪಹರಿಸಿರಲಿಲ್ಲ: ಉಲ್ಟಾ ಹೊಡೆದ ಮಹಿಳೆಯಿಂದ ಎಚ್ ಡಿ ರೇವಣ್ಣಗೆ ಲಾಭ

Krishnaveni K
ಸೋಮವಾರ, 13 ಮೇ 2024 (09:41 IST)
ಹಾಸನ: ನನ್ನನ್ನು ಯಾರೂ ಅಪಹರಿಸಿಲ್ಲ, ನಾಲ್ಕು ದಿನ ನೆಂಟರ ಮನೆಗೆ ಹೋಗಿ ಬರೋಣ ಎಂದು ಬಂದಿದ್ದೆ ಎಂದು ಅಪಹರಣಕ್ಕೊಳಗಾಗಿದ್ದಾಳೆ ಎನ್ನಲಾಗಿದ್ದ ಮಹಿಳೆ ಹೇಳಿಕೆ ನೀಡಿದ್ದು ಬಂಧಿತರಾಗಿರುವ ಮಾಜಿ ಸಚಿವ ಎಚ್ ಡಿ ರೇವಣ್ಣಗೆ ಇದರಿಂದ ಲಾಭವಾಗಲಿದೆ.

ಮಹಿಳೆಯರ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಎಚ್ ಡಿ ರೇವಣ್ಣರನ್ನು ಬಂಧಿಸಲಾಗಿತ್ತು. ಈ ಸಂಬಂಧ ರೇವಣ್ಣ ಆಪ್ತನನ್ನೂ ಬಂಧಿಸಲಾಗಿತ್ತು. ಅಲ್ಲದೆ, ಭವಾನಿ ರೇವಣ್ಣಗೂ ನೋಟಿಸ್ ನೀಡಲಾಗಿತ್ತು. ಆದರೆ ಈಗ ಮಹಿಳೆ ವಿಡಿಯೋವೊಂದನ್ನು ಬಿಡುಗಡೆ ಮಾಡಿ ನನ್ನನ್ನು ಯಾರೂ ಅಪಹರಿಸಿಲ್ಲ ಎಂದಿರುವುದು ಪ್ರಕರಣಕ್ಕೆ ಟ್ವಿಸ್ಟ್ ನೀಡಿದೆ.

‘ನನ್ನನ್ನು ಯಾರೂ ಅಪಹರಿಸಿಲ್ಲ. ನಾನಾಗಿಯೇ ಮನೆಯಿಂದ ಹೊರಬಂದಿದ್ದೇನೆ. ಭವಾನಿ ರೇವಣ್ಣ, ಪ್ರಜ್ವಲ್, ಬಾಬಣ‍್ಣರಿಂದ ನನಗೆ ಯಾವುದೇ ತೊಂದರೆಯಾಗಿಲ್ಲ. ನಮ್ಮ ಊರಿನವರು ಏನೇನೋ ಹೇಳುವುದು ಕೇಳಿ ಬೇಸರವಾಗಿತ್ತು. ಹೀಗಾಗಿ ನೆಂಟರ ಮನೆಗೆ ಹೋಗಿದ್ದೆ. ಎರಡು ದಿನಗಳ ಬಳಿಕ ನಾನೇ ಬರುತ್ತೇನೆ. ದಯವಿಟ್ಟು ಯಾರೂ ಮನೆ ಹತ್ರ ಬಂದು ನಮಗೆ ತೊಂದರೆ ಕೊಡಬೇಡಿ. ಮನೆ ಹತ್ರ ಪೊಲೀಸರು ಬಂದರೆ ಅಕ್ಕಪಕ್ಕದವರು ಏನಂದುಕೊಳ್ಳಲ್ಲ? ಮಕ್ಕಳು ಗಾಬರಿಯಾಗುತ್ತಾರೆ. ನನಗೆ, ನನ್ನ ಗಂಡ, ಮಕ್ಕಳಿಗೆ ಏನಾದರೂ ಆದರೆ ನೀವೇ ಹೊಣೆಯಾಗಬೇಕಾಗುತ್ತದೆ. ಅದಕ್ಕೆ ರೆಡಿ ಎಂದರೆ ಬರಬಹುದು’ ಎಂದು ಮಹಿಳೆ ವಿಡಿಯೋದಲ್ಲಿ ಹೇಳಿಕೆ ನೀಡಿದ್ದಾಳೆ.

ಆಕೆಯ ಈ ಹೇಳಿಕೆ ಪ್ರಕರಣಕ್ಕೆ ಹೊಸ ತಿರುವು ನೀಡಲಿದೆ.  ಸದ್ಯಕ್ಕೆ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಎಚ್ ಡಿ ರೇವಣ್ಣ ನ್ಯಾಯಾಂಗ ಬಂಧನದಲ್ಲಿದ್ದಾರೆ. ಮೇ 14 ರವರೆಗೆ ಅಂದರೆ ನಾಳೆಯವರೆಗೆ ಅವರ ನ್ಯಾಯಾಂಗ ಬಂಧನ ಅವಧಿಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments