Publish Date: Mon, 25 Jun 2018 (18:41 IST)
Updated Date: Mon, 25 Jun 2018 (18:46 IST)
ಕಾರವಾರ: ಇಡಗುಂಜಿಯ ಪ್ರಸಿದ್ಧ ವಿನಾಯಕ ದೇವಸ್ಥಾನಕ್ಕೆ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡರು ಭೇಟಿ ನೀಡಿದರು. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಇಡಗುಂಜಿಯಲ್ಲಿರುವ ವಿನಾಯಕ ದೇವಸ್ಥಾನದಲ್ಲಿ ಪೂಜೆ ನೆರವೇರಿಸಿದರು. ಹೆಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾದ ಹಿನ್ನಲೆಯಲ್ಲಿ ಕುಟುಂಬದ ಪರ ಪೂಜೆ ಸಲ್ಲಿಸಿದರು. ಇದೇ ವೇಳೆ ಹಣ ಹೋಮವನ್ನೂ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ನೆರವೇರಿಸಿದರು. ಕಳೆದ ಮೂವತ್ತು ವರ್ಷಗಳಿಂದಲೂ ಇಡಗುಂಜಿ ವಿನಾಯಕ ದೇವರಿಗೆ ಮಾಜಿ ಪ್ರಧಾನಿ ಭಕ್ತಿಯಿಂದ ನಡೆದುಕೊಳ್ಳುತ್ತಿದ್ದಾರೆ.