Publish Date: Mon, 10 Apr 2023 (20:30 IST)
Updated Date: Mon, 10 Apr 2023 (18:59 IST)
ಇಂದು ಕರ್ನಾಟಕ, ನಾಳೆ ತಮಿಳುನಾಡು, ನಾಡಿದ್ದು ಆಂಧ್ರ ಪ್ರದೇಶ ಮತ್ತು ತೆಲಂಗಾಣ, ಬಿಜೆಪಿಯ ಸುಪಾರಿ ಆಟ ಶುರುವಾಗಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಅಂದು ಬಿಜೆಪಿಗರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಮೆಚ್ಚಿಸಲು ಅಮುಲ್ ಪರ ವಕಾಲತ್ತು ವಹಿಸಿ, ನಂದಿನಿಯನ್ನು ಮುಗಿಸಲು ಹೊರಟಿದ್ದರು.. ಅಂದಿನ ಮುಖ್ಯಮಂತ್ರಿಗಳೂ ಸೇರಿ ಬಿಜೆಪಿ ಮುಂಚೂಣಿ ನಾಯಕರು ಅಮುಲ್ ಪರ ಬ್ಯಾಟ್ ಬೀಸಿದ್ದರು.. ಈಗ ಪಾತ್ರಗಳು ಬದಲಾಗಿವೆ ಎಂದು ಕಿಡಿಕಾರಿದ್ದಾರೆ.. ಕರ್ನಾಟಕವನ್ನು ಗುಜರಾತಿನ ವಸಾಹತು ಮಾಡುವ ಬಿಜೆಪಿಯ ಹುನ್ನಾರ ಇಂದು ನಿನ್ನೆಯದಲ್ಲ.. ವೈಬ್ರೆಂಟ್ ಗುಜರಾತಿನ ಮಹತ್ವಾಕಾಂಕ್ಷೆಯ ಹಿಂದೆಯೇ ಕರ್ನಾಟಕವನ್ನು ಕೆಳಕ್ಕೆ ಕೆಡಹುವ ಬಿಜೆಪಿಯ ಧೂರ್ತ ಅಜೆಂಡಾ ಈ ಚುನಾವಣೆ ಹೊತ್ತಿನಲ್ಲಿ ಬಟಾಬಯಲಾಗಿದೆ.. 15 ವರ್ಷಗಳ ಹಳೆಯ ಸಂಚಿಗೆ ಮತ್ತೆ ಜೀವ ನೀಡಲಾಗಿದೆ.. ಇದು ಬಿಜೆಪಿಯ ದುರಾಡಳಿತ ಎಂದು HDK ವಾಗ್ದಾಳಿ ನಡೆಸಿದ್ದಾರೆ.