Publish Date: Wednesday, 27 September 2023 (16:20 IST)
Updated Date: Wednesday, 27 September 2023 (16:45 IST)
ಕಾವೇರಿ ಅಸ್ತ್ರ ಹಿಡಿದು ಸರ್ಕಾರದ ವಿರುದ್ಧ ದೋಸ್ತಿ ಹೋರಾಟ ಶುರುವಾಗಿದೆ. ಹೌದು, ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ, ಜೆಡಿಎಸ್ ಜಂಟಿ ಹೋರಾಟ ಆರಂಭಿಸಿವೆ. ಮೈತ್ರಿ ಬಳಿಕ ಮೊದಲ ಬಾರಿಗೆ ಜಂಟಿ ಹೋರಾಟ ನಡೆಸಿರುವ ನಾಯಕರು, ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದ್ರು. ಪ್ರತಿಭಟನೆಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಹೆಚ್. ಡಿ. ಕುಮಾರಸ್ವಾಮಿ, ಡಿ. ವಿ. ಸದಾನಂದಗೌಡ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ , ಗೋವಿಂದ್ ಕಾರಜೋಳ ಅಶ್ವತ್ಥ್ ನಾರಾಯಣ, ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಶಾಸಕರು, ಪರಿಷತ್ ಸದಸ್ಯರು, ಭಾಗಿಯಾಗಿದ್ರು.