ಮಂಡ್ಯ-ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಆಗುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಗೆಲುವಿಗೆ ರಣತಂತ್ರದ ಜತೆಗೆ ಸಾಧಕ-ಬಾಧಕಗಳ ಚರ್ಚೆ ನಡೆಯುತ್ತಿದೆ. ಚಿಕ್ಕಮಗಳೂರಿನ ಖಾಸಗಿ ರೆಸಾರ್ಟ್‌ನಲ್ಲಿ ಹೆಚ್ಡಿಕೆ ತಮ್ಮ ಪಕ್ಷದ ನಾಯಕರುಗಳ ಜೊತೆ ನಿರಂತರ ಸಮಾಲೋಚನೆ ನಡೆಸುತ್ತಿದ್ದಾರೆ. ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಉತ್ಸುಕರಾಗಿದ್ದಾರೆನ್ನಲಾಗಿದೆ.
2019ರ ಲೋಕಸಭೆ ಚುನಾವಣೆಯಲ್ಲಿ ಪುತ್ರ ನಿಖೀಲ್ ಕುಮಾರಸ್ವಾಮಿ ಮೈತ್ರಿ ಅಭ್ಯರ್ಥಿಯಾಗಿಯೂ ಸೋತಿದ್ದರ ಬಗ್ಗೆ ಚರ್ಚೆ ನಡೆದಿದ್ದು, ಮತ್ತೆ ಅದು ಮರುಕಳಿಸದಂತೆ ಎಚ್ಚರ ವಹಿಸಲು ಹೆಚ್ಡಿಕೆ ತಂತ್ರಗಾರಿಕೆ ಮಾಡುತ್ತಿದ್ದಾರೆ. ಅಭ್ಯರ್ಥಿ ಆಯ್ಕೆ ಬಗ್ಗೆ 8 ವಿಧಾನಸಭಾ ಕ್ಷೇತ್ರಗಳ ಜೆಡಿಎಸ್ ನಾಯಕರ ಅಭಿಪ್ರಾಯ ಸಂಗ್ರಹಿಸಲಾಗಿದೆ. ಕುಮಾರಸ್ವಾಮಿ ಸ್ಪರ್ಧಿಸಿದರೆ ಎಲ್ಲರೂ ಒಗ್ಗಟ್ಟಿನಿಂದ ದುಡಿಯುವ ಬಗ್ಗೆ ಒಮ್ಮತ ವ್ಯಕ್ತವಾಗಿದೆ. ಒಂದು ವೇಳೆ ಸಂಸದೆ ಸುಮಲತಾ ಕಾಂಗ್ರೆಸ್‌ನಿಂದ ಅಥವಾ ಪಕ್ಷೇತರವಾಗಿ ಸ್ಪರ್ಧೆಗಿಳಿದರೆ ಯಾವ ರೀತಿ ಚುನಾವಣೆ ಮಾಡಬೇಕು ಎಂಬುದರ ಬಗ್ಗೆಯೂ ಚರ್ಚೆ ನಡೆಸಲಾಗಿದೆ.