Publish Date: Mon, 16 Oct 2023 (19:00 IST)
Updated Date: Mon, 16 Oct 2023 (19:02 IST)
ಕುಮಾರಸ್ವಾಮಿ ಅವರೇನು ಆದಾಯ ತೆರಿಗೆ ಇಲಾಖೆಯ ಪ್ರತಿನಿಧಿಯೇ ಎಂಬುದಾಗಿ ಡಿ.ಕೆ.ಶಿವಕುಮಾರ್ ನೀಡಿದ್ದ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿರುವ ಎಚ್.ಡಿ. ಕುಮಾರಸ್ವಾಮಿ, ''ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ನೋಡಿಕೊಂಡನಂತೆ.ಕಳ್ಳನ ಮನಸ್ಸು ಹುಳ್ಳುಳ್ಳಗೆ ಎನ್ನುವ ಗಾದೆ ಮಾತುಗಳು ಯಾರಿಗೆ ಅನ್ವಯ ಆಗುತ್ತವೋ ಇಲ್ಲವೋ ಗೊತ್ತಿಲ್ಲ.ಆದರೆ, ಡಿಕೆ ಸಹೋದರರಿಗೆ ಕರಾರುವಾಕ್ಕಾಗಿ ಅನ್ವಯಿಸುತ್ತವೆ. ಹೀಗಿದ್ದ ಮೇಲೆ ಸತ್ಯ ಮುಚ್ಚಿಟ್ಟರೆ ''ಶಿವ'' ಮೆಚ್ಟುತ್ತಾನೆಯೇ ಎಂದು ಟಾಂಗ್ ನೀಡಿದ್ದಾರೆ.