Webdunia - Bharat's app for daily news and videos

Install App

ಕೊನೆಗೂ ಪ್ರತ್ಯಕ್ಷವಾದ ಪ್ರಜ್ವಲ್‌ ರೇವಣ್ಣ: ಸಮಾಧಾನ ತಂದಿದೆ ಎಂದ ಎಚ್‌ಡಿಕೆ

Sampriya
ಸೋಮವಾರ, 27 ಮೇ 2024 (17:51 IST)
Photo Courtesy X
ಚಿಕ್ಕಬಳ್ಳಾಪುರ: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಸಂಸದ ಪ್ರಜ್ವಲ್ ರೇವಣ್ಣ ಅಜ್ಞಾತ ಸ್ಥಳದಿಂದ ವಿಡಿಯೊ ಕಳುಹಿಸಿ ಇದೇ 31ರಂದು ಎಸ್‌ಐಟಿ ಮುಂದೆ ಹಾಜರಾಗುವುದಾಗಿ ಹೇಳಿದ್ದಾರೆ. ಈ ಕುರಿತು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ಇವತ್ತು ನಮಗೂ ಸ್ವಲ್ಪ ಸಮಾಧಾನ ತಂದಿದೆ ಎಂದಿದ್ದಾರೆ.

ಬರೋಬ್ಬರಿ ಒಂದು ತಿಂಗಳ ಬಳಿಕ ವಿದೇಶದಲ್ಲಿದ್ದುಕೊಂಡು ಸೋಮವಾರ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದು, ಇದೇ ಮೇ 31ರಂದು ಬೆಳಗ್ಗೆ 10.30ಕ್ಕೆ ಎಸ್​​ಐಟಿ ಮುಂದೆ ವಿಚಾರಣೆಗೆ ಹಾಜರಾಗುವುದಾಗಿ ಹೇಳಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿದ ಎಚ್‌ಡಿಕೆ, ಪ್ರಜ್ವಲ್‌ ಎಲ್ಲೆ ಇದ್ದರೂ ಬಂದು ಎಸ್‌ಐಟಿ ಮುಂದೆ ಹಾಜರಾಗುವ ಮೂಲಕ ತನಿಖೆಗೆ ಸಹಕಾರ ಕೊಡುವಂತೆ ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡ ಹಾಗೂ ನಾನು ಕೇಳಿಕೊಂಡಿದ್ದೆವು. ಈ ಬಗ್ಗೆ ದೇವೇಗೌಡರು ಎಚ್ಚರಿಕೆ ಕೊಟ್ಟರೆ, ನಾನು ಮನವಿ ಮಾಡಿಕೊಂಡಿದ್ದೆ. ಅಲ್ಲದೇ ಇದೇ ವೇಳೆ ಕಾರ್ಯಕರ್ತರ ಮೇಲೆ ನಂಬಿಕೆ ಇದ್ದರೆ ಕೂಡಲೇ ಬರಬೇಕು ಎಂದು ಹೇಳಿದ್ದೆವು ಎಂದರು.

ಪ್ರಜ್ವಲ್ ಪ್ರಕರಣದಲ್ಲಿ ದೊಡ್ಡ ಷಡ್ಯಂತ್ರ ನಡೆದಿದೆ. ಷಡ್ಯಂತರ ನಡೆಸಿರುವುದು ಕಾಂಗ್ರೆಸ್ ಎನ್ನುವುದು ಇಡೀ ಜಗತ್ತಿಗೆ ಗೊತ್ತು. ಕಾನೂನಿನ ಮುಂದೆ ಎಲ್ಲರೂ ಸಮಾನರು, ಯಾರು ದೊಡ್ಡವರಿಲ್ಲ ಎಲ್ಲರೂ ಕಾನೂನಿಗೆ ತಲೆ ಬಾಗಲೇಬೇಕು. ಮುಂದಿನ ದಿನಗಳಲ್ಲಿ ಏನೇನೋ ನಡೆಯುತ್ತದೆ ನೋಡೋಣ. ಈಗಲೇ‌ ಪ್ರಕರಣದ ಬಗ್ಗೆ ಏನು ಹೇಳುವುದಿಲ್ಲ ಎಂದು ಹೇಳಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ