ಬೆಂಗಳೂರು: ವರುಣನ ಆಗಮನದಿಂದ ಕಾವೇರಿ ನದಿಯಲ್ಲಿ ಒಳ ಹರಿವಿನ ಪ್ರಮಾಣ ಸ್ವಲ್ಪ ಪ್ರಮಾಣದಲ್ಲಿ ಹೆಚ್ಚಿದ್ದು, ತಮಿಳುನಾಡಿಗೆ ಹರಿಯಬಿಟ್ಟಿರುವುದಕ್ಕೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿ ಮುಂಗಾರು ನಿರೀಕ್ಷಿತ ಪ್ರಮಾಣದಲ್ಲಿ ಬಂದಿಲ್ಲ. ಮುಂಗಾರು ಕೈಕೊಟ್ಟಿರುವುದರಿಂದ ಬರ ಪರಿಸ್ಥಿತಿ ಇದೆ. ಹೀಗಿರುವಾಗ ತಮಿಳುನಾಡಿಗೆ ನೀರು ಹರಿಯಬಿಟ್ಟಿರುವುದೇಕೆ ಎಂದು ಅವರು ಪ್ರಶ್ನಿಸಿದ್ದಾರೆ.
ತಕ್ಷಣವೇ ನೀರು ಬಿಡುವನ್ನು ನಿಲ್ಲಿಸಬೇಕು. ಒಳ ಹರಿವಿನ ನೀರನ್ನು ಕೆರೆಗಳಿಗೆ ಬಿಡಬೇಕು. ಇಲ್ಲದಿದ್ದರೆ, ಕಾವೇರಿ ಕೊಳ್ಳದಲ್ಲಿ ರೈತರು ಹೋರಾಟ ನಡೆಸುತ್ತಿದ್ದಾರೆ. ಅವರ ಜತೆ ಸೇರಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ