Publish Date: Mon, 02 Oct 2023 (15:24 IST)
Updated Date: Mon, 02 Oct 2023 (16:21 IST)
ಕಾಂಗ್ರೆಸ್ ಸರ್ಕಾರ ಇನ್ನು ಆರೇ ತಿಂಗಳಲ್ಲಿ ಪತನವಾಗುತ್ತದೆ ಎಂಬ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಹೇಳಿಕೆಗೆ ತೀಕ್ಷ್ಮಣವಾಗಿ ಪ್ರತಿಕ್ರಿಯಿಸಿದ ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರು ಕುಮಾರಸ್ವಾಮಿ ಯಾವಾಗ ಜ್ಯೋತಿಷ್ಯ ಹೇಳೋಕೆ ಶುರು ಮಾಡಿದ್ದಾರೋ ನನಗೆ ಗೊತ್ತಿಲ್ಲ ಎಂದರು. ಲಿಂಗಾಯತರಿಗೆ ಕಾಂಗ್ರೆಸ್ ಸರ್ಕಾರದಲ್ಲಿ ಬೆಲೆ ಸಿಗುತ್ತಿಲ್ಲ ಎನ್ನುವ ಶಾಮನೂರು ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ ಅದನ್ನೆಲ್ಲ ಮುಖ್ಯಮಂತ್ರಿಗಳು ಗಮನಿಸುತ್ತಾರೆ ಎಂದ ಅವರು ಜಾತಿ ಆಧಾರದ ಮೇಲೆ ಅಧಿಕಾರಿಗಳನ್ನು ನೇಮಿಸುವುದನ್ನು ಸರ್ಕಾರ ಮಾಡುವುದಿಲ್ಲ ಎಂದು ಡಾಂಗ್ ನೀಡಿದ್ರು