ಆರೋಗ್ಯ ಕಾಪಾಡುವುದು ಅಗತ್ಯ

Webdunia
ಮಂಗಳವಾರ, 25 ಜನವರಿ 2022 (16:55 IST)
ರಾಜ್ಯದಲ್ಲಿ ಸುಮಾರು 2 ಲಕ್ಷ ಮಂದಿ ವೈದ್ಯ ಶಿಕ್ಷಣ ಪಡೆಯುತ್ತಿದ್ದಾರೆ. ಇವರನ್ನು ಬಳಸಿಕೊಂಡು ಮಾನಸಿಕ ಅನಾರೋಗ್ಯಗಳಿಗೆ ಪರಿಹಾರ ಕಂಡುಕೊಳ್ಳಬೇಕು. ಈ ಪ್ರಾಯೋಗಿಕ ಕಾರ್ಯಕ್ರಮವನ್ನು ಉತ್ತಮವಾಗಿ ಜಾರಿ ಮಾಡಿ ಸರ್ಕಾರಕ್ಕೆ ವರದಿ ನೀಡಬೇಕು. ನಂತರ ಮುಂದಿನ ಬಜೆಟ್​ನಲ್ಲಿ ಈ ಕಾರ್ಯಕ್ರಮಕ್ಕಾಗಿ ಹೆಚ್ಚು ಅನುದಾನ ಮೀಸಲಿಡಬಹುದು ಎಂದು ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.
ಕಾರ್ಯಕ್ರಮದಲ್ಲಿ ಮಾತನಾಡಿದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಕೊವಿಡ್ ಸಂದರ್ಭದಲ್ಲಿ ನಿಮ್ಹಾನ್ಸ್ ನೇತೃತ್ವದಲ್ಲಿ, ಅನೇಕ ಕೊರೊನಾ ರೋಗಿ ಹಾಗೂ ಕುಟುಂಬದವರ ಮಾನಸಿಕ ಆರೋಗ್ಯ ನಿರ್ವಹಣೆಗೆ ಒತ್ತು ನೀಡಲಾಯಿತು. ಕೆಲ ಪ್ರಕರಣಗಳಲ್ಲಿ ಆತ್ಮಹತ್ಯೆಯ ಘಟನೆಯೂ ನಡೆಯಿತು. ಆ ವೇಳೆ ಅನೇಕರಿಗೆ ಮಾನಸಿಕ ಆರೋಗ್ಯ ಆಪ್ತ ಸಮಾಲೋಚನೆ ಸೇವೆ ನೀಡಲಾಯಿತು. ಇದನ್ನು ಇನ್ನಷ್ಟು ಮುಂದುವರಿಸಲಾಗುತ್ತಿದೆ. ಮಾನಸಿಕ ಆರೋಗ್ಯವು ದೈಹಿಕ ಆರೋಗ್ಯದ ಮೇಲೆ ಪರಿಣಾಮ ಬೀರುವ ಅಂಶ. ಮೆದುಳಿನ ಆರೋಗ್ಯ ಇಡೀ ದೇಹದ ಒಟ್ಟು ಆರೋಗ್ಯ ಕಾಪಾಡಲು ಅಗತ್ಯವಾಗಿದೆ. ನಿಮ್ಹಾನ್ಸ್ ಜನರ ಬಳಿಯೇ ಹೋಗಿ ಆರೋಗ್ಯ ಸೇವೆ ನೀಡುವಂತಹ ಪ್ರತಿಷ್ಠಿತ ಸಂಸ್ಥೆಯಾಗಿದೆ. ಸಾಮಾನ್ಯ ಫಿಸಿಶೀಯನ್ ಕೂಡ ಮಾನಸಿಕ ಆರೋಗ್ಯ ಸೇವೆ ನೀಡುವಂತೆ ನಿಮ್ಹಾನ್ಸ್ ತರಬೇತಿ ನೀಡಲಿದೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಕ್ರೋಚ್‌ ಜನತಾ ಪಾರ್ಟಿಯ ಎಕ್ಸ್ ಖಾತೆಗೆ ನಿರ್ಬಂಧ ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ ಅಭಿಜಿತ್ ದೀಪ್ಕೆ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಪೆಟ್ರೋಲ್, ಡೀಸೆಲ್ ದರ ಹೆಚ್ಚಳದಿಂದ ರಾಜ್ಯ ಸರ್ಕಾರಕ್ಕೇ ಲಾಭ, ಆದ್ರೂ ಕಾಂಗ್ರೆಸ್ ಮೊಸಳೆ ಕಣ್ಣೀರು: ಆರ್ ಅಶೋಕ್

ಜಗತ್ತಿನಲ್ಲೇ ಅತಿ ಹೆಚ್ಚು ಪೆಟ್ರೋಲ್, ಡೀಸೆಲ್ ಬೆಲೆ ಹೊಂದಿರುವ ದೇಶ ಯಾವುದು ತಿಳಿದರೆ ಅಚ್ಚರಿಯಾಗುತ್ತೆ

ಮುಂದಿನ ಸುದ್ದಿ
Show comments