ಮಾರ್ಚ್ ತಿಂಗಳಿನಿಂದ ಆರೋಗ್ಯ ಕರ್ನಾಟಕ ಯೋಜನೆ ಜಾರಿಗೆ ಬಂದಿದ್ದು, 1524 ಸೇವೆಗಳು ಆರೋಗ್ಯ ಕರ್ನಾಟಕ ವ್ಯಾಪ್ತಿಗೆ ಬಂದಿವೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಹೇಳಿದ್ದಾರೆ.
ಕಲಬುರಗಿಯಲ್ಲಿ ಮಾತನಾಡಿದ ಕಲಬುರ್ಗಿ ಜಿಲ್ಲಾ ಆರೋಗ್ಯ ಮತ್ತು ಕುಟಂಬ ಕಲ್ಯಾಣಾಧಿಕಾರಿ ಡಾ.ಎಂ.ಕೆ.ಪಾಟೀಲ, ಹೊಸ ಯೋಜನೆಯ ಪ್ರಕಾರ ಯಾವುದೇ ರೋಗಿಯಾಗಲಿ ಮೊದಲು ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಬೇಕು.
ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಸಿಗದೇ ಇದ್ದ ಪಕ್ಷದಲ್ಲಿ ಬೇರೆ ಆಸ್ಪತ್ರೆಗೆ ವೈದ್ಯರು ರೆಫರ್ ಮಾಡಲಿದ್ದಾರೆ. ಈ ನಿಟ್ಟಿನಲ್ಲಿ ಖಾಸಗಿ ಆಸ್ಪತ್ರೆಗಳೊಂದಿಗೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ. ಕಲಬುರ್ಗಿಯ 27 ಖಾಸಗಿ ಆಸ್ಪತ್ರೆಗಳ ಜೊತೆ ಮಹಾರಾಷ್ಟ್ರ ಸೋಲಾಪುರದ 6 ಮತ್ತು ತೆಲಂಗಾಣದ ಹೈದರಾಬಾದ್ ನ 9 ಆಸ್ಪತ್ರೆಗಳ ಜೊತೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ.
ಮುಂದಿನ ದಿನಗಳಲ್ಲಿ ಆರೋಗ್ಯ ಕರ್ನಾಟಕ ಯೋಜನೆ ವ್ಯಾಪ್ತಿಗೆ ಮತ್ತಷ್ಟು ಯೋಜನೆಗಳು ಬರಲಿವೆ ಎಂದು ಅವರು ತಿಳಿಸಿದ್ದಾರೆ.