Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಂಗಳೂರು: ರಾಜ್ಯಕ್ಕೆ ಮುಂಗಾರು ಪ್ರವೇಶವಾಗಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮೋಡ ಕವಿದ ವಾತಾವರಣದ ಜೊತೆಗೆ ಮಳೆಯಾಗುತ್ತಿದೆ.
ನಾಳೆಯಿಂದ ಮಳೆ ತೀವ್ರತೆ ಹೆಚ್ಚಾಗಲಿದ್ದು, ಕರಾವಳಿ ಭಾಗದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನ ಹಲವೆಡೆ ಭಾರೀ ಮಳೆಯಾಗಿದ್ದು, ಕೆಲವೆಡೆ ಮನೆಗೆ ನೀರು ನುಗ್ಗಿದೆ.
ವಾಡಿಕೆಯಂತೆ ಜೂನ್ 1 ರಂದು ರಾಜ್ಯಕ್ಕೆ ಬರಬೇಕಿದ್ದ ಮುಂಗಾರು ನಾಲ್ಕು ದಿನ ತಡವಾಗಿ ಪ್ರವೇಶ ಮಾಡಿದೆ. ಕರಾವಳಿಯಲ್ಲಿ ಈಗಾಗಲೇ ಧಾರಾಕಾರ ಮಳೆಯಾಗುತ್ತಿದ್ದು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.