ಭಾರೀ ಮಳೆ ಮುನ್ಸೂಚನೆ: ನಾಳೆ ಈ ಭಾಗದ ಶಾಲಾ ಮಕ್ಕಳಿಗೆ ರಜೆ ಘೋಷಣೆ

Sampriya
ಭಾನುವಾರ, 17 ಆಗಸ್ಟ್ 2025 (18:05 IST)
ಬೆಂಗಳೂರು:  ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಹಿನ್ನೆಲೆ ಈ ಭಾಗದ ಶಾಲೆಗಳಿಗೆ ಸೋಮವಾರ ರಜೆ ಘೋಷಣೆ ಮಾಡಲಾಗಿದೆ.  ಮುನ್ನೆಚ್ಚರಿಕಾ ಕ್ರಮವಾಗಿ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಶನಿವಾರ ಉತ್ತಮ ಮಳೆಯಾಗಿದೆ. ಇನ್ನೂ ಚಂಡಮಾರುತ ಪರಿಣಾಮವಾಗಿ ರಾಜ್ಯದಲ್ಲಿ ಇನ್ನೂ ಮೂರು ದಿನ ಭಾರೀ ಮಳೆಯಾಗುವ ಮುನ್ಸೂಚನೆಯಿದೆ. 

ಈ ಹಿನ್ನೆಲೆ 18ರಂದು ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಸೇರಿ ಐದು ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ರೆಡ್‌ ಅಲರ್ಟ್‌ ನೀಡಲಾಗಿದೆ. 

ಇನ್ನು ಕೊಡಗು, ಬೆಳಗಾವಿ, ವಿಜಯಪುರ, ಕಲಬುರಗಿ ಜಿಲ್ಲೆಗೆ ಆರೆಂಜ್‌ ಅಲರ್ಟ್‌ ಘೋಷಿಸಿದ್ದು, ವ್ಯಾಪಕ ಮಳೆಯಾಗಲಿದೆ . ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಿದ್ದು, ಹಗುರದಿಂದ ಸಾಧಾರಣ ಮಳೆ ನಿರೀಕ್ಷೆ ಇದೆ.

ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಂಜಾಬ್‌ನ ಮೊಹಾಲಿಯಲ್ಲಿ 30 ಎಕರೆ ಜಾಗದಲ್ಲಿ ₹300ಕೋಟಿ ವೆಚ್ಚದಲ್ಲಿ ಇನ್ಫೋಸಿಸ್ ಹೊಸ ಕ್ಯಾಂಪಸ್‌

ಭಾರತದ ಕ್ರಿಕೆಟಿಗರು, ಪಾಕ್ ಕ್ರಿಕೆಟಿಗರ ಜತೆ ಶೇಕ್ ಹ್ಯಾಂಡ್ ಮಾಡ್ಬೇಕಿತ್ತು: ಶಶಿ ತರೂರ್

ಪಹಲ್ಗಾಮ್ ದಾಳಿಯ ಭಯೋತ್ಪಾದಕರಿಗೆ ಸಹಾಯ ಮಾಡಿದ್ದ ಶಿಕ್ಷಕನ ಬಂಧನ

ರಸ್ತೆ ಗುಂಡಿ ಮುಚ್ಚಿ, ಬೆಂಗಳೂರಿನ ಮಾನ ಕಾಪಾಡಿ: ಬಿವೈ ವಿಜಯೇಂದ್ರ

ಬಿಜೆಪಿಯವರು ಹೇಳಿದ್ರೆಂದು ಎಸ್‌ಎಲ್ ಭೈರಪ್ಪರ ಸ್ಮಾರಕ ಮಾಡ್ತಿಲ್ಲ

ಮುಂದಿನ ಸುದ್ದಿ
Show comments