Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ಕೆಲವು ದಿನಗಳಿಂದ ಕಡಿಮೆಯಾಗಿದ್ದ ಮಳೆ ಮತ್ತೆ ಆರ್ಭಟಿಸಲಾರಂಭಿಸಿದೆ. ನಿನ್ನೆ ಸಂಜೆಯಿಂದಲೇ ಬೆಂಗಳೂರಿನ ಹಲವೆಡೆ ಮಳೆ ಶುರುವಾಗಿದೆ. ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದು ಕೂಡ ಭಾರೀ ಮಳೆಯಾಗಲಿದೆ. ರಾಜ್ಯದಲ್ಲಿ ಹಿಂಗಾರು ಮಳೆ ಮತ್ತೆ ಚುರುಕುಗೊಳ್ಳುತ್ತಿದ್ದು, ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಆಗಲಿದ್ದು, ಒಟ್ಟು 8 ಜಿಲ್ಲೆಗಳಿಗೆ ಹಳದಿ ಅಲರ್ಟ್ ನೀಡಲಾಗಿದೆ. ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಇಂದು ಮಿಂಚು ಸಹಿತ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಕರ್ನಾಟಕದ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ನವೆಂಬರ್ 13 ಮತ್ತು 14ರಂದು ಮಳೆಯಾಗಲಿದೆ. ಬೆಂಗಳೂರು ಸೇರಿದಂತೆ ಚಾಮರಾಜನಗರ, ಕೊಡಗು, ಮಂಡ್ಯ, ಮೈಸೂರು, ಹಾಸನ, ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಬೀಳಲಿದೆ.