Publish Date: Sun, 05 Jun 2022 (19:08 IST)
Updated Date: Sun, 05 Jun 2022 (19:27 IST)
ಕರ್ನಾಟಕದಲ್ಲಿ ಮಳೆಯ ಅಬ್ಬರ ಹೆಚ್ಚಾಗಿದ್ದು, ಕರಾವಳಿ ಜಿಲ್ಲೆಗಳು ಮತ್ತು ಬೆಂಗಳೂರಿನಲ್ಲಿ ವರುಣನ ಆರ್ಭಟವಿರಲಿದೆ, ಇನ್ನೂ 3 ದಿನ ಹಳದಿ ಎಚ್ಚರಿಕೆ ಘೋಷಣೆ ಮಾಡಲಾಗಿದೆ. ಕರ್ನಾಟಕದಲ್ಲಿ ಮುಂದಿನ ಮೂರು ದಿನ ಭಾರೀ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಜೂನ್ 7 ರವರಗೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳು ಮತ್ತು ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಹಳದಿ ಎಚ್ಚರಿಕೆ ನೀಡಲಾಗಿದೆ.
Geetha
Publish Date: Sun, 05 Jun 2022 (19:08 IST)
Updated Date: Sun, 05 Jun 2022 (19:27 IST)