Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ರಾಜ್ಯದಲ್ಲಿ ಇನ್ನೂ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ನ.20ರವರೆಗೆ ರಾಜ್ಯದ ಕರಾವಳಿ, ಮಲೆನಾಡಿನಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೆಂಗಳೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ತುಮಕೂರಿನಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.
ಚಾಮರಾಜನಗರ, ಚಿಕ್ಕಮಗಳೂರು, ಕೊಡಗು , ಹಾಸನ , ಶಿವಮೊಗ್ಗ , ಮೈಸೂರಿನಲ್ಲಿ ಕೂಡ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.