Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಕರ್ನಾಟಕದಲ್ಲಿ ಇನ್ನೇನು ಮುಂಗಾರು ಮುಗಿದಿದೆ ಎನ್ನುವಾಗಲೇ ಮತ್ತೆ ಮಳೆ ಮೋಡ ಕಾಣಿಸಿಕೊಂಡಿದೆ. ಮುಂದಿನ ಎರಡು ದಿನಗಳ ಕಾಲ 12 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಅಕ್ಟೋಬರ್ 1 ಹಾಗೂ 2 ರಂದು ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಕಲಬುರಗಿ, ರಾಯಚೂರು, ದಕ್ಷಿಣ ಒಳನಾಡಿನ ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ತುಮಕೂರಿನಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದೆ.