ಧಾರಾಕಾರ ಮಳೆಯಿಂದಾಗಿ ಮಂಗಳೂರಿನಲ್ಲಿ ಆ. 7 ರಿಂದ 9ರವೆಗೆ ಎರಡು ದಿನ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಹೇಳಿಕೆ ನೀಡಿದ್ದು, ನಾಳೆಯಿಂದ ಎರಡು ದಿನ ರೆಡ್ ಅಲರ್ಟ್ ಜಾರಿಯಲ್ಲಿರುತ್ತದೆ.
ಭಾರಿ ಮಳೆ ಆಗುವ ಸಾಧ್ಯತೆ ಇದೆ. ಅಲ್ಲಲ್ಲಿ ಗುಡ್ಡ ಕುಸಿತ, ಮರ ಬೀಳುವುದು ಆಗುತ್ತಿವೆ. ಕಡಲ್ಕೊರೆತ ಕಾಣಿಸಿಕೊಂಡಿದೆ ಎಂದರು.
ನೆರೆ ಪೀಡಿತ ಪ್ರದೇಶಗಳ ಜನರು ಹೆಚ್ಚು ಎಚ್ಚರಿಕೆಯಿಂದ ಇರಬೇಕು ಎಂದಿರೋ ಅವರು, ನೆರೆ ಹಾವಳಿ ಆಗುವ ಸಂದರ್ಭದಲ್ಲಿ ಅಧಿಕಾರಿಗಳ ಸೂಚನೆ ಪಾಲಿಸಬೇಕು. ಚಾರ್ಮಾಡಿಯಲ್ಲಿ ಗುಡ್ಡ ಕುಸಿತ ಆಗಿದೆ.
ಎರಡು ಕಡೆ ಗುಡ್ಡ ಕುಸಿತ ಆಗಿದೆ ಅಂತ ಮಾಹಿತಿ ನೀಡಿದ್ರು.