ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಬತ್ತಿ ಹೋಗಿದ್ದ ಶ್ರೀಕ್ಷೇತ್ರ ಧರ್ಮಸ್ಥಳದ ಜೀವನದಿ ನೇತ್ರಾವತಿ ತುಂಬಿ ಹರಿಯುತ್ತಿದೆ.
ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ ಜಲಕ್ಷಾಮ ಉಂಟಾಗಿದ್ದು, ಈ ಹಿನ್ನಲೆಯಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವಿರೇಂದ್ರ ಹೆಗಡೆಯವರು ಧರ್ಮಸ್ಥಳದ ಶ್ರೀಕ್ಷೇತ್ರ ಭೇಟಿಯನ್ನು ಮುಂದೂಡುವಂತೆ ಭಕ್ತರಲ್ಲಿ ಮನವಿ ಮಾಡಿದ್ದರು.
ಆದರೆ ಇದೀಗ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಮೊದಲ ಮಳೆಗೆ ನೇತ್ರಾವತಿ ನದಿ ತುಂಬಿತುಳುಕುತ್ತಿದ್ದು ಧರ್ಮಸ್ಥಳದ ಸ್ನಾನಘಟ್ಟ ಭರ್ತಿಯಾಗಿದೆ. ಇದರಿಂದ ಭಕ್ತರಲ್ಲಿ ಸಂತಸ ಮನೆಮಾಡಿದೆ.