Daily Horoscope
✕

ರಾಜ್ಯದಲ್ಲಿ ನ.7ರವರೆಗೆ ಗುಡುಗು ಸಹಿತ ಭಾರಿ ಮಳೆ

Webdunia
ಬುಧವಾರ, 3 ನವೆಂಬರ್ 2021 (22:03 IST)
ಬೆಂಗಳೂರು: ರಾಜ್ಯದಲ್ಲಿ ನ.7ರವರೆಗೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿಯಲ್ಲಿ ನ. 7ರವರೆಗೂ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಕೊಪ್ಪಳದಲ್ಲಿ ಮುಂದಿನ ಎರಡು ದಿನ ಮಳೆಯಾಗಲಿದೆ. ಕಲಬುರಗಿ, ರಾಯಚೂರು, ವಿಜಯಪುರ ಹಾಗೂ ಯಾದಗಿರಿಯಲ್ಲಿ ಮಳೆ ಪ್ರಮಾಣ ಕಡಿಮೆ ಇರಲಿದೆ.
ದ.ಒಳನಾಡಿನ ಜಿಲ್ಲೆಗಳ ಕೆಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇರುವುದರಿಂದ ಭಾನುವಾರದವರೆಗೂ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ನೀಡಲಾಗಿದೆ.
ಕರಾವಳಿಯಲ್ಲಿ ನ.7 ನಂತರ ಮಳೆ ಇಳಿಕೆ:
ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ, ಉತ್ತರ‌ಕನ್ನಡ ಜಿಲ್ಲೆಗಳಲ್ಲಿ ಗುರುವಾರ ಮಳೆಯಾಗುವ ಸಾಧ್ಯತೆಯಿದೆ. ನ. 7ರ ನಂತರ ಮಳೆ ಪ್ರಮಾಣ ಕಡಿಮೆಯಾಗಲಿದೆ.‌ ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣವಿದ್ದು, ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏನಿದು ಸ್ಟಾರ್ಲಿಂಕ್, ಎಲಾನ್ ಮಸ್ಕ್ ಸ್ಟಾರ್ಲಿಂಕ್ ಭಾರತದ ಭದ್ರತೆ ಎಷ್ಟು ಅಪಾಯಕಾರಿ, ಗಮನಿಸಿ

ವಿಮಾನದಲ್ಲಿ ಅಭಿಜಿತ್ ದಿಪ್ಕೆ ವಶಕ್ಕೆ ಪಡೆಯುವಾಗ ದೇಶದಿಂದ ಹೊರಗೆ ಹಾಕಿ ಎಂದು ಕೂಗಿದ ಸಹಪ್ರಯಾಣಿಕರು: Video

ದಲಿತರ ಸಮಸ್ಯೆ ಕಡೆ ರಾಜ್ಯ ಗೃಹ ಸಚಿವರು ಗಮನ ಹರಿಸಲಿ: ಛಲವಾದಿ ನಾರಾಯಣಸ್ವಾಮಿ

ಅತಿಯಾದ ಆಲೋಚನೆಯಿಂದ ಮುಕ್ತಿ ಪಡೆಯುವುದು ಹೇಗೆ: ಗುರು ಶ್ರೀ ಶ್ರೀ ರವಿ ಶಂಕರ್ ನೀಡಿದ ಸರಳ ಸೂತ್ರಗಳು

ನಮಗ್ಯಾಕೆ ತೊಂದರೆ ಕೊಡಬೇಕು..: ವಿಮಾನದಲ್ಲಿ ಅಭಿಜಿತ್ ದೀಪ್ಕೆ ವರ್ತನೆಗೆ ಬೇಸತ್ತ ಸಹಯಾತ್ರಿಕರ ಆಕ್ರೋಶ Video

ಮುಂದಿನ ಸುದ್ದಿ
Show comments