ತಮಿಳುನಾಡಿನ ಚೆನ್ನೈನಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಆದರಂತೆ ರಾಜ್ಯದಲ್ಲಿ ನಿನ್ನೆ ರಾತ್ರಿ ಭಾರಿ ಮಳೆಯಾಗಿದೆ. ರಾತ್ರಿಯಿಡೀ ಸುರಿದ ಭಾರೀ ಮಳೆಯಿಂದಾಗಿ ಚೆನ್ನೈನ ಕೆಲವು ಭಾಗಗಳು ಜಲಾವೃತವಾಗಿದ್ದು, ಹವಾಮಾನ ಪರಿಸ್ಥಿತಿಯ ದೃಷ್ಟಿಯಿಂದ ತಮಿಳುನಾಡು ಮತ್ತು ಪುದುಚೇರಿಯ 14 ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಹವಾಮಾನ ಇಲಾಖೆಯು ರಾಜ್ಯದ ಕೆಲವು ಭಾಗಗಳಲ್ಲಿ ಇನ್ನೂ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ ಮತ್ತು ಅಧಿಕಾರಿಗಳು ಚೆನ್ನೈನಲ್ಲಿ 5,093 ಪರಿಹಾರ ಶಿಬಿರಗಳನ್ನು ಸ್ಥಾಪಿಸಿದ್ದಾರೆ. ಭಾರೀ ಮಳೆಯಿಂದಾಗಿ ರಸ್ತೆಗಳೆಲ್ಲಾ ಜಲಾವೃತವಾಗಿದ್ದು, ವಾಹನಗಳ ಸಂಚಾರ ಕಷ್ಟಕರವಾಗಿದೆ. ಚೆನ್ನೈ ಹೊರತುಪಡಿಸಿ, ತಿರುವಳ್ಳೂರು, ಕಾಂಚೀಪುರಂ, ವೆಲ್ಲೂರು, ಸೇಲಂ ಮತ್ತು ರಾಮನಾಥಪುರಂ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.